Advertisement

ಚುನಾವಣಾ ಕರ್ತವ್ಯ ಲೋಪ : ಮೂವರು ಶಿಕ್ಷಕರ ಅಮಾನತು

07:12 PM Oct 18, 2021 | Team Udayavani |

ವಿಜಯಪುರ: ಜಿಲ್ಲೆಯ ಸಿಂದಗಿ ವಿಧಾನಸಭೆ ಉಪಚುನಾವಣೆಗೆ ಸಂಬಂಧಪಟ್ಟಂತೆ ಚುನಾವಣಾ ಕಾರ್ಯಕ್ಕೆ ನೇಮಿಸಿದ ಮೂವರು ಶಿಕ್ಷಕರು ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಜಿಲ್ಲಾಧಿಕಾರಿ  ಪಿ.ಸುನಿಲಕುಮಾರ ಆದೇಶಿಸಿದ್ದಾರೆ.

Advertisement

ಸಿಂದಗಿ ವಿದ್ಯಾನಗರದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ನಂ-4 ಶಾಲೆಯ ವಿ.ವಿ.ನಿಂಬರ್ಗಿ ಸ.ಶಿ., ಎಸ್.ಆರ್. ಸಿಂದಗಿ ಹಾಗೂ ಆರ್.ಎ.ಕಠಾರೆ. ಸ.ಶಿ. ಇವರನ್ನು ಅಮಾನತು ಮಾಡಲಾಗಿದೆ ಎಂದು ವಿವರಿಸಿದ್ದಾರೆ.

ಈ ಮೂವರು ಶಿಕ್ಷಕರ ವಿರುದ್ಧ ಇಲಾಖಾ ವಿಚಾರಣೆ ಬಾಕಿ ಇರಿಸಿ. ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಲಾಗಿದೆ. ಆಪಾದಿತ ನೌಕರರು ಈ ಅವಧಿಯಲ್ಲಿ ಮೇಲಾಧಿಕಾರಿಗಳ ಅನುಮತಿ ಇಲ್ಲದೆ ಕೇಂದ್ರಸ್ಥಾನ ಬಿಡತಕ್ಕದ್ದಲ್ಲ ಎಂದೂ ನಿರ್ದೇಶನ ನೀಡಲಾಗಿದೆ.

ಸದರಿ ಆದೇಶವು ತಕ್ಷಣದಿಂದ ಜಾರಿಯಲ್ಲಿ ಬಂದಿದ್ದು, ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ನೌಕರರನ್ನು ಕರ್ತವ್ಯದಿಂದ ಇಂದೇ ಬಿಡುಗಡೆ ಮಾಡಿ ವರದಿ ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next