Advertisement
ಈ 15 ಸ್ಥಾನಗಳು ಉತ್ತರಪ್ರದೇಶ, ಹಿಮಾಚಲ ಪ್ರದೇಶ ಮತ್ತು ಕರ್ನಾಟಕದ್ದಾಗಿವೆ. ಉತ್ತರಪ್ರದೇಶದಲ್ಲಿ 10 ಸ್ಥಾನಗಳಿದ್ದು, 11 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಎಸ್‌ಪಿ ತನ್ನ 3 ಅಭ್ಯರ್ಥಿಗಳನ್ನು (ಜಯಾ ಬಚ್ಚನ್, ರಾಮ್‌ಜಿಲಾಲ್ ಸುಮನ್, ಅಲೋಕ್ ರಂಜನ್) ಮರುನಾಮ ನಿರ್ದೇಶನ ಮಾಡಿದೆ. ಇನ್ನು, ಬಿಜೆಪಿ 7ರ ಬದಲಾಗಿ 8 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಒಂದು ವೇಳೆ ಬಿಜೆಪಿಯು 8ನೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದೇ ಇರುತ್ತಿದ್ದರೆ, ಉ.ಪ್ರದೇಶದ ಎಲ್ಲ 10 ರಾಜ್ಯಸಭಾ ಸ್ಥಾನಗಳ ಅಭ್ಯರ್ಥಿಗಳೂ ಅವಿರೋಧವಾಗಿ ಆಯ್ಕೆಯಾಗುತ್ತಿದ್ದರು. ರಾಜ್ಯಸಭೆ ಚುನಾವಣೆಯಲ್ಲಿ ಗೆಲ್ಲಬೇಕೆಂದರೆ, ಪ್ರತೀ ಅಭ್ಯರ್ಥಿಯು ಸುಮಾರು 37 ಪ್ರಥಮ ಆದ್ಯತೆಯ ಮತಗಳನ್ನು ಗಳಿಸಬೇಕಾಗುತ್ತದೆ.
ನಡೆಯಲಿದೆ. ಅವಿರೋಧ ಆಯ್ಕೆ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಅಶೋಕ್ ಚವಾಣ್, ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್, ಎಲ್. ಮುರುಗನ್ ಸೇರಿದಂತೆ ಒಟ್ಟು 41 ನಾಯಕರು ಅವಿರೋಧವಾಗಿ ಮೇಲ್ಮನೆಗೆ ಆಯ್ಕೆಯಾಗಿದ್ದಾರೆ.
Related Articles
Advertisement