ನವದೆಹಲಿ : ಭಾರತದ ನೂತನ ಉಪರಾಷ್ಟ್ರಪತಿ ಚುನಾವಣೆ ದಿನಾಂಕ ನಿಗದಿಯಾಗಿದ್ದು ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಬುಧವಾರ ಪ್ರಕಟಿಸಿದೆ. ಅಲ್ಲದೆ ಅಗತ್ಯ ಬಿದ್ದರೆ ಅದೇ ದಿನ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದಿದೆ.
ಎಂ ವೆಂಕಯ್ಯ ನಾಯ್ಡು ಅವರ ಉತ್ತರಾಧಿಕಾರಿಯನ್ನು ನಿರ್ಧರಿಸುವ ಚುನಾವಣೆಗೆ ಜುಲೈ 5 ರಂದು ಅಧಿಸೂಚನೆ ಹೊರಡಿಸಲಾಗುವುದು ಎಂದು ಚುನಾವಣೆ ಆಯೋಗ ಹೇಳಿದ್ದು ಜುಲೈ 5ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ಜುಲೈ 19ರಂದು ಉಮೇದುವಾರಿಕೆ ಸಲ್ಲಿಸಲು ಕೊನೆಯ ದಿನವಾಗಿರಲಿದೆ. ಜುಲೈ 20ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ವಾಪಸ್ ಪಡೆದುಕೊಳ್ಳಲು ಜುಲೈ 22 ಕೊನೆಯ ದಿನವಾಗಿದೆ. ಆಗಸ್ಟ್ 6 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಚುನಾವಣೆಗೆ ಮತದಾನ ನಡೆಯಲಿದ್ದು, ಅಂದೇ ಮತಗಳ ಎಣಿಕೆ ಪ್ರಕ್ರಿಯೂ ನಡೆಯಲಿದೆ.
ಇದನ್ನೂ ಓದಿ : ಶಿರಚ್ಛೇದ ಖಂಡಿಸಿ ರಾಜಸ್ಥಾನದಲ್ಲಿ ಹಿಂಸಾತ್ಮಕ ಪ್ರತಿಭಟನೆ; ಕಲ್ಲು ತೂರಾಟ