Advertisement

ತಪ್ಪದೇ ಮತ ಚಲಾಯಿಸಿ: ಸುರೇಶ ವರ್ಮಾ

01:03 PM Dec 09, 2021 | Team Udayavani |

ಶಹಾಬಾದ: ಪ್ರಜಾಪ್ರಭುತ್ವ ಎಂದರೆ ಜನರಿಗೆ ಸೇರಿದ, ಜನರಿಗೋಸ್ಕರ, ಜನರೇ ನಡೆಸುವ ಒಂದು ವ್ಯವಸ್ಥೆ. ಪ್ರಜಾಪ್ರಭುತ್ವದ ಅತ್ಯಂತ ಪ್ರಮುಖ ಅಂಗವಾದ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ನಿಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿ ಎಂದು ತಹಶೀಲ್ದಾರ್‌ ಸುರೇಶ ವರ್ಮಾ ಹೇಳಿದರು.

Advertisement

ನಗರಸಭೆ ಸಭಾಂಗಣದಲ್ಲಿ ವಿಧಾನಪರಿಷತ್‌ ಚುನಾವಣೆ ನಿಮಿತ್ತ ನಗರಸಭೆಯ ಎಲ್ಲ ಸದಸ್ಯರಿಗೆ ಮತದಾನದ ಕುರಿತು ತಿಳಿವಳಿಕೆ ನೀಡುವ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವ ರಾಷ್ಟ್ರದ ಪ್ರಜೆಯಾಗಿರುವುದು ನಮಗೆ ಹೆಮ್ಮೆ. ಹಾಗೆಯೇ, ಮತ ಹಾಕುವುದು ನಮ್ಮ ಹಕ್ಕು ಮಾತ್ರವಲ್ಲ, ಜವಾಬ್ದಾರಿ ಕೂಡ. ಈ ಜವಾಬ್ದಾರಿಯನ್ನು ನಾವು ನಿಷ್ಠೆಯಿಂದ ನಿಭಾಯಿಸಬೇಕಿದೆ. ಉತ್ತಮ ಸಮಾಜದ ನಿರ್ಮಾಣಕ್ಕಾಗಿ, ಸಮರ್ಥ ಜನಪ್ರತಿನಿಧಿ ಆಯ್ಕೆಗಾಗಿ ತಪ್ಪದೇ ಮತ ಚಲಾಯಿಸಬೇಕು. ಸೂಚನೆಗಳು ಕಾಲಕಾಲಕ್ಕೆ ಗಣನೀಯವಾಗಿ ಬದಲಾಗುತ್ತಿರುತ್ತವೆ. ಈ ಹಿನ್ನೆಲೆಯಲ್ಲಿ ಪ್ರತಿ ಚುನಾವಣೆ ಕಾರ್ಯವೂ ಹೊಸದಾಗಿರುತ್ತದೆ. ನಾವುಗಳು ಎಷ್ಟೇ ತರಬೇತಿ ಪಡೆ ದಿದ್ದರೂ ಕೆಲವು ವಿಷಯಗಳನ್ನು ಮತ್ತೆ ಕಲಿಯಬೇಕಾಗುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲು ಎಲ್ಲರೂ ಮತದಾನದಲ್ಲಿ ಭಾಗವಹಿಸಬೇಕು ಎಂದರಲ್ಲದೇ ಮತದಾನದ ವಿಧಾನದ ಕುರಿತು ಅಣುಕು ಮತದಾನ ಮಾಡುವ ಹಾಗೂ ಮತದಾನದ ದಿನ ಅನುಸರಿಸಬೇಕಾದ ಕ್ರಮದ ಬಗ್ಗೆ ಮಾಹಿತಿ ಒದಗಿಸಿದರು.

ನಗರಸಭೆ ಪೌರಾಯುಕ್ತ ಡಾ| ಕೆ. ಗುರಲಿಂಗಪ್ಪ ಮಾತನಾಡಿ, ಮತ ಚಲಾಯಿಸುವ ಅವಕಾಶವನ್ನು ನಾವೆಂದು ಕಳೆದುಕೊಳ್ಳಬಾರದು. ನಾವು ಕೊಡುವ ಒಂದು ಮತ ಸ್ವಸ್ಥ ಸಮಾಜಕ್ಕೆ ಅಮೂಲ್ಯ ಕೊಡುಗೆ. ಹಾಗೆಯೇ, ಸೂಕ್ತ ವ್ಯಕ್ತಿ ಆರಿಸುವುದು ಅಷ್ಟೇ ಮುಖ್ಯ. ತಪ್ಪದೇ ಮತ ಚಲಾಯಿಸಿ. ಯಾವುದೇ ಭಯ, ಆಮಿಷಗಳಿಲ್ಲದೇ ಮುಕ್ತವಾಗಿ ಮತದಾನದಲ್ಲಿ ಭಾಗವಹಿಸಿ ಪ್ರಜಾಪ್ರಭುತ್ವದ ವ್ಯವಸ್ಥೆ ಗಟ್ಟಿಗೊಳ್ಳಬೇಕಾದರೆ ನಿವೆಲ್ಲ ಮತದಾನದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ನಗರಸಭೆ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ಉಪಾಧ್ಯಕ್ಷೆ ಸಲೀಮಾಬೇಗಂ, ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ನಾಟೇಕಾರ, ನಗರಸಭೆ ಚುನಾಯಿತ ಸದಸ್ಯರು, ನಾಮ ನಿರ್ದೇಶಿತ ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next