ಬೆಂಗಳೂರು: ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ ಜೂ.6ರಿಂದ ರಾಜ್ಯ ಬಿಜೆಪಿ ನಾಯಕರು ಪ್ರಚಾರ ಆರಂಭಿಸಲಿದ್ದಾರೆ.
ಇದಕ್ಕಾಗಿ ಅರುಣ್ ಸಿಂಗ್ ಶನಿವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ.
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸಹಿತ ಪ್ರಮುಖ ನಾಯಕರು ಜೂ. 6, 7, 8 ಹಾಗೂ 11ರಂದು ವಿವಿಧ ಕಡೆ ಪ್ರವಾಸ ಮಾಡಲಿದ್ದಾರೆ.
ಜೂ. 9ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.ಜೂ.13ರಂದು ನಡೆಯಲಿರುವ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.