Advertisement

Election ದರ್ಶನ್ ಧ್ರುವನಾರಾಯಣ್ ವಿರುದ್ಧ ಯಾರೂ ಅಭ್ಯರ್ಥಿಗಳನ್ನು ಹಾಕಬಾರದು

05:16 PM Apr 08, 2023 | Team Udayavani |

ಹನೂರು: ದರ್ಶನ್ ಧ್ರುವನಾರಾಯಣ್ ವಿರುದ್ಧ ಬಿಜೆಪಿ ಸೇರಿದಂತೆ ಯಾವುದೇ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಬಾರದು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಹನೂರು ಕ್ಷೇತ್ರದ ಅಭ್ಯರ್ಥಿ ಎಂ.ಆರ್. ಮಂಜುನಾಥ್ ಒತ್ತಾಯಿಸಿದರು.

Advertisement

ಹನೂರು ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಂ ಆರ್ ಮಂಜುನಾಥ್ ಒಂದು ತಿಂಗಳ ಅಂತರದಲ್ಲಿ ತಂದೆ ತಾಯಿ ಇಬ್ಬರನ್ನು ಕಳೆದುಕೊಂಡಿರುವುದು ದುರ್ದೈವ, ಇದನ್ನು ಮನಗಂಡು ತಾಯಿ ಹೃದಯದ ಕುಮಾರಸ್ವಾಮಿ ಅವರು ಉತ್ತಮ ನಿರ್ಧಾರ ಕೈಗೊಂಡಿದ್ದು ನಂಜನಗೂಡು ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದಿರಲು ತೀರ್ಮಾನಿಸಿದ್ದಾರೆ. ಅಂತೆಯೇ ಬಿಜೆಪಿ ಹಾಗೂ ಇನ್ನಿತರ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದೆ ದರ್ಶನ್ ಧ್ರುವನಾರಾಯಣ್ ಅವರ ಅವಿರೋಧ ಆಯ್ಕೆಗೆ ಸಹಕರಿಸಬೇಕು ಎಂದು ಒತ್ತಾಯಿಸಿದರು.

ದರ್ಶನ್ ಅವರ ಅವಿರೋಧ ಆಯ್ಕೆ ಆದಲ್ಲಿ ನಮ್ಮನ್ನೆಲ್ಲ ಅಗಲಿದ ಹಿರಿಯ ನಾಯಕ ಧ್ರುವನಾರಾಯಣ್ ಅವರ ಆತ್ಮಕ್ಕೆ ಶಾಂತಿ ದೊರೆಯಲಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next