Advertisement
ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಕೊಂಕಣಿ, ಬ್ಯಾರಿ, ಯಕ್ಷಗಾನ, ತುಳು, ಅರೆಭಾಷೆ ಅಕಾಡೆಮಿಗಳಿಗೂ ಅವಿಭಜಿತ ದ.ಕ. ಜಿಲ್ಲೆಗೂ ಸಂಬಂಧ ಹೆಚ್ಚಿದೆ. ಕಳೆದ ಚುನಾವಣೆಯಲ್ಲಿ ಪರಭಾವ ಗೊಂಡ ಪಕ್ಷದ ಅಭ್ಯರ್ಥಿಗಳು ಹಾಗೂ ಸ್ಥಳೀಯ ಮುಖಂಡರ ಸಲಹೆ ಪಡೆದು ಅಧ್ಯಕ್ಷರ ನೇಮಕ ಮಾಡಲಾಗುವುದು. ಕಾಂಗ್ರೆಸ್ ಕಟ್ಟಾಳು, ಪಕ್ಷದ ಬಾವುಟ ಹಿಡಿದು ದುಡಿದವರಿಗೆ ಅಕಾಡೆಮಿಯಲ್ಲಿ ಅವಕಾಶ ಕಲ್ಪಿಸಲಾಗುವುದು. ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿ, ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.
ಅಯೋಧ್ಯೆ ವಿಚಾರದಲ್ಲಿ ನಾವು ಯಾವುದೇ ಅಂತರ ಕಾಯ್ದುಕೊಂಡಿಲ್ಲ. ನಾವು ಕೂಡ ರಾಮ ಮತ್ತು ಆಂಜನೇಯನ ಭಕ್ತರು. ಬಿಜೆಪಿ ರಾಮನನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ. ಧರ್ಮ ಇದ್ದರೆ ಮಾತ್ರ ಬಿಜೆಪಿಗೆ ರಾಜಕಾರಣ ಮಾಡಲು ಸಾಧ್ಯ. ಬಿಜೆಪಿಗೆ ಅಭಿವೃದ್ಧಿ ಮತ್ತು ಬಡವರ ಚಿಂತನೆ ಬೇಕಾಗಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ ಎಷ್ಟು ರೈತರಿಗೆ ನೀರಾವರಿ ವ್ಯವಸ್ಥೆ ಮಾಡಿದ್ದಾರೆ? ಎಷ್ಟು ಉದ್ಯೋಗ ಕೊಟ್ಟಿದ್ದಾರೆ? ಬಿಜೆಪಿಗೆ ಚುನಾವಣೆ ಬಂದಾಗ ಧರ್ಮ, ಮಸೀದಿ, ಪಾಕಿಸ್ಥಾನ ನೆನಪಾಗುತ್ತದೆ. ಮತ್ತೂಬ್ಬರ ಹೆಗಲಲ್ಲಿ ಬಂದೂಕು ಇಟ್ಟು ಬಿಜೆಪಿ ದೇಶ ಆಳಿದೆ. ಕರ್ನಾಟಕದಲ್ಲಿ ಆದ ಪರಿಸ್ಥಿತಿಯೇ ದೇಶದಲ್ಲೂ ಬಿಜೆಪಿಗೆ ಬರಲಿದೆ ಎಂದು ಸಚಿವ ತಂಗಡಗಿ ಕಿಡಿಕಾರಿದರು.