Advertisement
ಕಷ್ಟ ಕಾಲದಲ್ಲಿ ಪಕ್ಷದ ಅಧ್ಯಕ್ಷರಾಗಿ ಸಂಘಟನೆ ಮಾಡಿದ್ದು, ತಮ್ಮ ಕುಟುಂಬಕ್ಕಾಗಿ ಜೈಲು ಸೇರಿದ ಅಂಶಗಳ ಹಿನ್ನೆಲೆಯಲ್ಲಿ ಸೋನಿಯಾಗಾಂಧಿಯವರು ಸಹಜವಾಗಿ ಡಿ.ಕೆ.ಶಿವಕುಮಾರ್ ಪರ ಇದ್ದಾರೆ. ಆದರೆ, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಅಹಿಂದ ಮತ ಕ್ರೋಢೀಕರಣ, ನರೇಂದ್ರ ಮೋದಿ ಎದುರಿಸಲು ಗಟ್ಟಿತನ ತೋರುವವರು ಬೇಕು ಎಂಬ ಕಾರಣಕ್ಕೆ ರಾಹುಲ್‌ಗಾಂಧಿಯವರು ಸಿದ್ದರಾಮಯ್ಯ ಪರ ನಿಂತಿದ್ದಾರೆ ಎಂದು ಹೇಳಲಾಗಿದೆ.
Related Articles
Advertisement
ಮೊದಲ ಅವಧಿಯ ಎರಡು ವರ್ಷ ನಾನು ಮುಖ್ಯಮಂತ್ರಿಯಾದ ನಂತರ ಡಿ.ಕೆ.ಶಿವಕುಮಾರ್‌ಗೆ ಬಿಟ್ಟುಕೊಡಲು ನನ್ನ ಅಭ್ಯಂತರವಿಲ್ಲ ಎಂದು ಸಿದ್ದರಾಮಯ್ಯ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೆ ಈ ಸೂತ್ರವನ್ನು ಡಿಕೆಶಿ ಒಪ್ಪಲು ತಯಾರಿಲ್ಲ. ಒಂದು ವರ್ಷವೋ, 5 ವರ್ಷವೋ ನಾನೇ ಮೊದಲು ಸಿಎಂ ಆಗಬೇಕೆಂದು ಡಿಕೆಶಿ ಪಟ್ಟು ಹಿಡಿದಿರುವುದೇ ತೀರ್ಮಾನ ವಿಳಂಬಕ್ಕೆ ಕಾರಣವಾಗಿದೆ.
ಈ ಮಧ್ಯೆ ದಿಲ್ಲಿಯಲ್ಲಿ ಸೋಮವಾರ ಖರ್ಗೆ, ಸೋನಿಯಾಗಾಂಧಿ, ರಾಹುಲ್‌ಗಾಂಧಿ ಅವರು ಸಭೆ ನಡೆಸಿ ಸಿಎಂ ಯಾರೆಂಬುದನ್ನು ತೀರ್ಮಾನಿಸಬೇಕಿತ್ತು. ಆದರೆ, ಸಿದ್ದರಾಮಯ್ಯ ದಿಲ್ಲಿ ತಲುಪಿದರೂ ಡಿ.ಕೆ.ಶಿವಕುಮಾರ್ ಅನಾರೋಗ್ಯದ ಕಾರಣದಿಂದ ಬೆಂಗಳೂರಿನಲ್ಲೇ ಉಳಿದರು. ಹೀಗಾಗಿ ನಿಗದಿತ ಸಭೆ ನಡೆಯದ ಕಾರಣ ಸಿಎಂ ಆಯ್ಕೆ ಕಸರತ್ತು ಮಂಗಳವಾರಕ್ಕೆ ಮುಂದೂಡಲ್ಪಟ್ಟಿದೆ.