Advertisement

ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆ-ಆಪರೇಷನ್ ಕಮಲದ ಭೀತಿ?

09:35 PM Oct 29, 2020 | mahesh |

ಚಿಕ್ಕಬಳ್ಳಾಪುರ: ತೀವ್ರ ಕುತೂಹಲ ಕೆರಳಿಸಿರುವ ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ – ಉಪಾಧ್ಯಕ್ಷರ ಸ್ಥಾನಗಳಿಗೆ ಅಕ್ಟೋಬರ್ 30 ರಂದು ಚುನಾವಣೆ ನಡೆಯಲಿದ್ದು ಕ್ಷಣ ಕ್ಷಣದಲ್ಲಿ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ.

Advertisement

ಒಟ್ಟು 31 ಸದಸ್ಯರನ್ನು ಹೊಂದಿರುವ ಇಲ್ಲಿನ ನಗರಸಭೆಯಲ್ಲಿ ಕಾಂಗ್ರೆಸ್ ಪಕ್ಷ 16, ಬಿಜೆಪಿ 9, ಜೆಡಿಎಸ್ 2 ಹಾಗೂ ಪಕ್ಷೇತರರು 4 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ಸಂಖ್ಯಾ ಬಲದಲ್ಲಿ ಬಹುಮತ ಹೊಂದಿರುವ ಕಾಂಗ್ರೆಸ್ ಪಕ್ಷದ ಸದಸ್ಯರು ಅಧಿಕಾರದ ಚುಕ್ಕಾಣಿ ಹಿಡಿಯಬಹುದಾಗಿದೆ ಆದರೇ ಕಾಂಗ್ರೆಸ್ ಪಕ್ಷದ ಇಬ್ಬರು ಸದಸ್ಯರು ಪ್ರವಾಸಕ್ಕೆ ತೆರಳಿದ್ದಾರೆ ಎಂದು ಒಬ್ಬರು ಮಾಹಿತಿ ನೀಡಿದರೆ ಇನ್ನೂ ಕಾಂಗ್ರೆಸ್ ಮುಖಂಡರು ಇಬ್ಬರು ನಗರಸಭಾ ಸದಸ್ಯರನ್ನು ಅಪಹರಿಸಲಾಗಿದೆ ಎಂದು ಗಂಭೀರವಾಗಿ ಆರೋಪಿಸಿ ಅಧಿಕಾರಕ್ಕಾಗಿ ಆಪರೇಷನ್ ಕಮಲ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಷಡ್ಯಂತರ ನಡೆಸಿದ್ದಾರೆ ಎಂದು ದೂರಿದ್ದಾರೆ.

ಆದರೇ ಜಿಲ್ಲಾ ಉಸ್ತುವಾರಿ ಸಚಿವರು ಕಾಂಗ್ರೆಸ್ ಮುಖಂಡರ ಆರೋಪವನ್ನು ತಳ್ಳಿ ಹಾಕಿದ್ದಾರೆ ಕಾಂಗ್ರೆಸ್ ಮುಖಂಡರು ಹತಾಷರಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಜನರನ್ನು ದಿಕ್ಕುತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ ತಿರುಗೇಟು ನೀಡಿದ್ದಾರೆ ಒಟ್ಟಾರೇ ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಹಣಾಹಣಿ ನಡೆಯುತ್ತಿದ್ದು ಜೆಡಿಎಸ್ ಪಕ್ಷದ ಇಬ್ಬರು ಸದಸ್ಯರು ಹಾಗೂ ಪಕ್ಷೇತರ ಸದಸ್ಯರು ಯಾವ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ.

ಹೈವೋಲ್ಟೇಜ್ ವಾತಾವರಣ: ಚಿಕ್ಕಬಳ್ಳಾಪುರ ನಗರಸಭೆಯ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಮತ್ತು ಬಿಜೆಪಿಗೆ ಪ್ರತಿಷ್ಠೆಯಾಗಿದ್ದು ಪ್ರತಿನಿತ್ಯ ಒಂದೆಲ್ಲಾ ಒಂದು ರೀತಿಯಲ್ಲಿ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ ಕಾಂಗ್ರೆಸ್ ಪಕ್ಷದ 16 ಸದಸ್ಯರ ಪೈಕಿ ಇಬ್ಬರು ಸದಸ್ಯರು ಕಾಂಗ್ರೆಸ್ ಮುಖಂಡರ ಸಂಪರ್ಕಕ್ಕೆ ಸಿಗುತ್ತಿಲ್ಲವೆಂದು ಸ್ವತಃ ಕಾಂಗ್ರೆಸ್ ಮುಖಂಡರು ವಿಚಾರವನ್ನು ಬಹಿರಂಗಗೊಳಿಸಿದ್ದು ಆಸೆ-ಆಮಿಷಗಳು ಮತ್ತು ಬೆದರಿಕೆಗಳನ್ನು ಒಡ್ಡಿ ಹಿಂಬಾಗಲಿನಿಂದ ಅಧಿಕಾರವನ್ನು ಹಿಡಿಯುವ ಪ್ರಯತ್ನ ಬಿಜೆಪಿ ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಧ್ಯಕ್ಷರ ಹೆಸರು ಸಹ ಗುಪ್ತ: ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಲ್ಲಾ ಪಕ್ಷದ ಸದಸ್ಯರು ಆಕಾಂಕ್ಷಿಗಳೇ ಏಕೆಂದರೇ ಸಾಮಾನ್ಯ ವರ್ಗಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿದೆ ಎಲ್ಲ ಅಂದಕೊಂಡಂತೆ ಆದರೇ ಕಾಂಗ್ರೆಸ್ ಪಕ್ಷದವರು ಅಧಿಕಾರ ಹಿಡಿಯಬಹುದು ಏನಾದರೇ ಬದಲಾವಣೆ ಆದರೇ ಜಿಲ್ಲಾ ಉಸ್ತುವಾರಿ ಸಚಿವರ ಅಭ್ಯರ್ಥಿ ಅಧ್ಯಕ್ಷ ಸ್ಥಾನ ಪಡೆದುಕೊಳ್ಳಬಹುದು ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆಯುತ್ತಿದೆ ಅಧ್ಯಕ್ಷ ಸ್ಥಾನದ ಹೆಸರು ಸಹ ಗೌಪ್ಯವಾಗಿದ್ದು ನಾಳೆ ನಾಮಪತ್ರ ಸಲ್ಲಿಸಿದ ಬಳಿಕ ಅಧ್ಯಕ್ಷ ಆಕಾಂಕ್ಷಿ ಯಾರು ಎಂಬುದು ಬಹಿರಂಗವಾಗಲಿದೆ.

Advertisement

ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಗಳ ಚುನಾವಣೆಗೆ ಸಂಬಂಧಿಸಿದಂತೆ ನಗರದಲ್ಲಿ ಅಹಿತಕರ ಘಟನೆಗಳು ನಡೆದು ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆಯೆಂದು ಶಂಕಿಸಿ ತಾಲೂಕು ದಂಡಾಧಿಕಾರಿಗಳು ತಮ್ಮ ಅಧಿಕಾರವನ್ನು ಪ್ರಯೋಗ ಮಾಡಿ ಸಾರ್ವಜನಿಕರ ಆಸ್ತಿಪಾಸ್ತಿಗಳನ್ನು ಸಂರಕ್ಷಣೆ ಮಾಡುವ ಹಿತದೃಷ್ಠಿಯಿಂದ ನಗರಸಭೆಯ ಸುತ್ತಮುತ್ತ 2 ಕಿ.ಮಿ. ವ್ಯಾಪ್ತಿಯಲ್ಲಿ ಸಿಆರ್‍ಪಿಸಿ ಕಲಂ 144 ಅಡಿಯಲ್ಲಿ ನಿಷೇದಾಜ್ಞೆಯನ್ನು ಜಾರಿ ಮಾಡಿದ್ದಾರೆ ಇದರಿಂದ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣಗೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next