Advertisement

ಗಡಿ ಭಾಗದ ಚೆಕ್‌ಪೋಸ್ಟ್‌ಗೆ ಚುನಾವಣಾಧಿಕಾರಿ ಭೇಟಿ

05:06 PM Apr 09, 2018 | Team Udayavani |

ಚಳ್ಳಕೆರೆ: ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ಹಲವಾರು ಪ್ರದೇಶಗಳಿವೆ. ಈ ಪ್ರದೇಶಗಳಲ್ಲಿ ಈಗಾಗಲೇ ಪೊಲೀಸ್‌ ಹಾಗೂ ಕಂದಾಯ ಇಲಾಖೆ ಸಹಯೋಗದೊಂದಿಗೆ ಚೆಕ್‌ಪೋಸ್ಟ್‌ ಸ್ಥಾಪಿಸಲಾಗಿದೆ. ಚುನಾವಣಾಧಿಕಾರಿ ಬಿ. ಆನಂದ್‌ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲಿಸಿದರು.

Advertisement

ದೊಡ್ಡಚೆಲ್ಲೂರು, ಕಡೇಹುಡೆ, ಸಿದ್ದೇಶ್ವರನದುರ್ಗ, ಪಾತಪ್ಪನಗುಡಿ ಮುಂತಾದ ಪ್ರದೇಶಗಳಿಗೆ ದಿಢೀರ್‌ ಭೇಟಿ ನೀಡಿ ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳೊಂದಿಗೆ ಚರ್ಚೆ ನಡೆಸಿದರು. ಚೆಕ್‌ಪೋಸ್ಟ್‌ ಮೂಲಕ ಹಾದುಹೋಗುವ ಎಲ್ಲ ವಾಹನಗಳ ತಪಾಸಣೆ ನಡೆಸಬೇಕು. ಅನುಮಾನ ಕಂಡುಬಂದಲ್ಲಿ ಕೂಡಲೇ ಹಿರಿಯ ಅಧಿಕಾರಿಗಳ ಗಮನಕ್ಕೆ ತರುವಂತೆ ಸೂಚನೆ ನೀಡಿದರು.

ಗಡಿಭಾಗದಲ್ಲಿರುವ ಆಂಧ್ರಪ್ರದೇಶದ ಹಲವಾರು ಗ್ರಾಮಗಳ ಜನರಿಗೂ ತಾಲೂಕಿನ ಜನರಿಗೂ ಅನ್ಯೋನ್ಯತೆ ಇದೆ. ಹಾಗಾಗಿ ಅಕ್ರಮ ಮದ್ಯ ಸೇರಿದಂತೆ ಇನ್ನಿತರ ಚಟುವಟಿಕೆಗಳು ನಡೆಯುವ ಸಾಧ್ಯತೆ ಇದೆ. ಆದ್ದರಿಂದ ಸಿಬ್ಬಂದಿ ಜಾಗರೂಕರಾಗಿರಬೇಕು ಎಂದರು.

ಇದೇ ಸಂದರ್ಭದಲ್ಲಿ ವಿವಿಧ ಗ್ರಾಮಗಳಿಗೆ ತೆರಳಿ ವಿವಿ ಪ್ಯಾಟ್‌ ಬಳಕೆ ಬಗ್ಗೆ ಮತದಾರರೊಂದಿಗೆ ಚರ್ಚೆ ನಡೆಸಿದರು. ಚುನಾವಣಾ ಸಿಬ್ಬಂದಿ ಗ್ರಾಮೀಣ ಜನರಿಗೆ ಇನ್ನೂ ಹೆಚ್ಚಿನ ಮಾರ್ಗದರ್ಶನ ನೀಡುವ ಅವಶ್ಯಕತೆ ಇದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಜನರು ಈ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಹೊಂದಿದ್ದು, ಸಂಬಂಧಪಟ್ಟ ಅಧಿಕಾರಿಗಳು ಜನರಿಗೆ ಸೂಕ್ತ ರೀತಿಯಲ್ಲಿ ತಿಳುವಳಿಕೆ ನೀಡಬೇಕೆಂದರು. ಈ ಸಂದರ್ಭದಲ್ಲಿ ಚುನಾವಣಾ ಸಿಬ್ಬಂದಿ ಶ್ರೀಧರ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next