Advertisement
ಕೇಶವ ಕೃಪಾದಲ್ಲಿ ನಡೆದ ಸಭೆಯಲ್ಲಿ ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಗುರಿ ತಲುಪಲು ಸರಕಾರದ ವರ್ಚಸ್ಸು ವೃದ್ಧಿ, ಶಾಸಕರ ಅಸಮಾಧಾನ ನಿವಾರಣೆ, ಸರಕಾರ ಮತ್ತು ಪಕ್ಷದ ನಡುವೆ ಹೊಂದಾಣಿಕೆ, ಅಭಿವೃದ್ಧಿ ಕಾರ್ಯಗಳ ಮೂಲಕ ಜನರ ವಿಶ್ವಾಸ ಗಳಿಸುವುದು ಸಹಿತ ಹಲವು ಪ್ರಮುಖ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಯಿತು ಎಂದು ಮೂಲಗಳು ತಿಳಿಸಿವೆ.
Related Articles
Advertisement
ಇಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ:
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಟಿಕೆಟ್‌ಗಾಗಿ ಅರ್ಜಿ ಹಾಕಿರುವ ಆಕಾಂಕ್ಷಿಗಳ ಸಭೆಯನ್ನು ಕಾಂಗ್ರೆಸ್ ಶುಕ್ರವಾರ (ನ.25) ಆಯೋಜಿಸಿದೆ.
ನಗರದ ಹೊರವಲಯದ ಹೊಟೇಲ್‌ನಲ್ಲಿ ಇಡೀ ದಿನ 1,350 ಆಕಾಂಕ್ಷಿಗಳ ಜತೆ ಸಮಾಲೋಚನೆ ನಡೆಸಲಿದೆ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆ ವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಸಭೆ ನಡೆಸಲಿದೆ.
ಬೆಳಗ್ಗಿನಿಂದಲೇ ವಿಭಾಗೀಯವಾರು ಸಭೆ ಆರಂಭವಾಗಲಿದ್ದು, ಪ್ರತಿ ಕ್ಷೇತ್ರದ ಆಕಾಂಕ್ಷಿಗಳ ಜತೆ ನಾಯಕರು ಮಾತನಾಡಿ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದ ಆಯ್ಕೆ ಎಂದು ಗೆಲುವಿಗೆ ಶ್ರಮಿಸಬೇಕು. ಯಾವುದೇ ಕಾರಣಕ್ಕೂ ಭಿನ್ನಮತ ಅಥವಾ ಆಂತರಿಕ ಸಂಘರ್ಷಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಕಿವಿ ಮಾತು ಹೇಳಲಿದ್ದಾರೆ.
ಪ್ರತಿ ಕ್ಷೇತ್ರಕ್ಕೆ ಕನಿಷ್ಠ 4ರಿಂದ ಗರಿಷ್ಠ 8 ಆಕಾಂಕ್ಷಿಗಳು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಪ್ರಾಥಮಿಕ ಹಂತದಲ್ಲೇ ಆಕಾಂಕ್ಷಿಗಳ ನಡುವೆ ತಿಕ್ಕಾಟ ನಡೆಯಬಾರದು ಎಂಬ ಕಾರಣಕ್ಕೆ ಮುಖಂಡರು ಈ ಸಭೆ ಕರೆದಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ಎರಡು ಸುತ್ತಿನ ಸಭೆ ನಡೆಸಿ ಕ್ಷೇತ್ರಾವಾರು ಆಕಾಂಕ್ಷಿಗಳ ಸಭೆ ನಡೆಸಿದ್ದ ಕಾಂಗ್ರೆಸ್ ಈಗ ಅಂತಿಮವಾಗಿ ಟಿಕೆಟ್‌ಗಾಗಿ ಅರ್ಜಿ ಹಾಕಿದ ಆಕಾಂಕ್ಷಿಗಳ ಸಭೆ ನಡೆಸುತ್ತಿದೆ.
ಜನವರಿ ವೇಳೆಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಬೇಕು. ಹೀಗಾದರೆ ಮಾತ್ರ ಕ್ಷೇತ್ರದಲ್ಲಿ ಪ್ರವಾಸ ಮಾಡಿ ಗೆಲುವಿಗೆ ಕಾರ್ಯತಂತ್ರ ರೂಪಿಸಲು ಸಾಧ್ಯ. ಇಲ್ಲದಿದ್ದರೆ ಕಷ್ಟವಾಗುತ್ತದೆ ಎಂದು ಬಹುತೇಕ ಆಕಾಂಕ್ಷಿಗಳು ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.
ಸಭೆಯ ಬಳಿಕ ದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಮುಖರಾದ ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್ ಸಮ್ಮುಖದಲ್ಲಿ ಮತ್ತೂಂದು ಸಭೆ ನಡೆದು ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.