Advertisement

ಚುನಾವಣಾ ಸಿದ್ಧತೆ: ಇಂದು ಬಿಜೆಪಿ ಮಹತ್ವದ ಕೋರ್‌ ಕಮಿಟಿ ಸಭೆ

10:21 PM Feb 02, 2023 | Team Udayavani |

ಬೆಂಗಳೂರು: ಚುನಾವಣಾ ಸಿದ್ಧತೆ ದೃಷ್ಟಿಯಿಂದ ಬಿಜೆಪಿಯ ಮಹತ್ವದ ಕೋರ್‌ ಕಮಿಟಿ ಸಭೆ ಶುಕ್ರವಾರ ನಡೆಯಲಿದ್ದು, ತಂತ್ರಗಾರಿಕೆ ದೃಷ್ಟಿಯಿಂದ ನಡೆಯುವ ರಾಜ್ಯಮಟ್ಟದ ಮೊದಲ ಉನ್ನತ ಹಂತದ ಸಭೆ ಇದಾಗಲಿದೆ.

Advertisement

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ 6 ಗಂಟೆಗೆ ಸಭೆ ಪ್ರಾರಂಭವಾಗಲಿದ್ದು, ಐದು ಪ್ರಮುಖ ವಿಚಾರಗಳ ಬಗ್ಗೆ ನಿರ್ಧಾರ ಪ್ರಕಟವಾಗಲಿದೆ. ಚುನಾವಣೆ ಸಿದ್ಧತೆ, ರಾಜ್ಯದ ನಾಲ್ಕು ದಿಕ್ಕುಗಳಿಂದ ನಡೆಯುವ ರಥಯಾತ್ರೆಯ ದಿನಾಂಕ, ಪಕ್ಷ ಹಾಗೂ ಸರ್ಕಾರದ ಮಟ್ಟದ ಸಮನ್ವಯತೆ, ಬಜೆಟ್‌ನಲ್ಲಿ ಇರಬೇಕಾದ ಪಕ್ಷದ ಆಶಯಗಳು ಹಾಗೂ ರಾಷ್ಟ್ರೀಯ ನಾಯಕರ ಪ್ರವಾಸದ ಬಗ್ಗೆ ಈ ಸಭೆಯಲ್ಲಿ ಚರ್ಚೆಯಾಗಲಿದೆ.

ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌, ಸಹ ಉಸ್ತುವಾರಿ ಅರುಣಾ ಕುಮಾರಿ, ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಸೇರಿದಂತೆ ಕೋರ್‌ ಕಮಿಟಿಯ ಇತರೆ ಸದಸ್ಯರು ಭಾಗಿಯಾಗಲಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next