ಹೊಸದಿಲ್ಲಿ: ಬಿಜೆಪಿಯ ಪ್ರತಿಷ್ಠೆಯ ಕಣವಾಗಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ನಿರೀಕ್ಷೆಯಂತೆಯೇ ಗುಜರಾತ್ ನಲ್ಲಿ ಭಾರತೀಯ ಜನತಾ ಪಾರ್ಟಿ ಮುನ್ನಡೆ ಸಾಧಿಸಿದೆ.
ಪ್ರಾಥಮಿಕ ವರದಿಯ ಪ್ರಕಾರ ಗುಜರಾತ್ ನಲ್ಲಿ ಬಿಜೆಪಿಯು 127 ಮತ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 51 ಕ್ಷೇತ್ರಗಳಲ್ಲಿ ಲೀಡ್ ನಲ್ಲಿದೆ. ದೊಡ್ಡ ಮ್ಯಾಜಿಕ್ ಮಾಡುವ ನಿರೀಕ್ಷೆ ಹುಟ್ಟಿಸಿದ್ದ ಅರವಿಂದ ಕೇಜ್ರೀವಾಲ್ ರ ಆಮ್ ಆದ್ಮಿ ಪಕ್ಷ ಸದ್ಯಕ್ಕೆ ಎರಡು ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಇತರರು ಎರಡು ಕ್ಷೇತ್ರಗಳಲ್ಲಿ ಲೀಡ್ ನಲ್ಲಿದ್ದಾರೆ.
ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ತವರು ರಾಜ್ಯ ಹಿಮಾಚಲ ಪ್ರದೇಶ ಚುನಾವಣೆಯು ಅತ್ಯಂತ ಪ್ರತಿಷ್ಠೆಯ ಕಣವಾಗಿದೆ. 68 ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಸ್ಪರ್ಧೆಯಿದೆ. ಮೊದಲ ಹಂತದಲ್ಲಿ ಬಿಜೆಪಿ 34 ಕ್ಷೇತ್ರಗಳು ಮತ್ತು ಕಾಂಗ್ರೆಸ್ 33 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಒಂದು ಕ್ಷೇತ್ರಗಳಲ್ಲಿ ಇತರರು ಲೀಡ್ ನಲ್ಲಿದ್ದಾರೆ.
ಇದನ್ನೂ ಓದಿ:ಸಿ.ಟಿ.ರವಿ ಲೂಟಿಕೋರ ಆಗಿರದಿದ್ದರೆ ಕ್ಷೇತ್ರದ ಜನ ‘ಲೂಟಿ ರವಿ’ ಎನ್ನಲು ಸಾಧ್ಯವೆ? ದಿನೇಶ್ ಗುಂಡೂರಾವ್ ಪ್ರಶ್ನೆ
ಗುಜರಾತ್ ನಲ್ಲಿ ಕಳೆದ 27 ವರ್ಷಗಳಿಂದ ಬಿಜೆಪಿ ಆಡಳಿತ ನಡೆಸುತ್ತಿದ್ದು, ಈ ಬಾರಿಯೂ ರಾಜ್ಯದಲ್ಲಿ ಬಹುಮತ ಗಳಿಸುವ ವಿಶ್ವಾಸವಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಸರ್ಕಾರ ಬದಲಾಗುವ ಹಿಮಾಚಲ ಪ್ರದೇಶದಲ್ಲಿ ಈ ಬಾರಿ ಮತ್ತೆ ಅಧಿಕಾರ ಹಿಡಿದು ಇತಿಹಾಸ ನಿರ್ಮಿಸುವ ಇರಾದೆಯಲ್ಲಿದೆ ಕಮಲ ಪಾಳಯ. ಆದರೆ ಐದು ವರ್ಷಗಳ ಬಳಿಕ ಅಧಿಕಾರ ಪಡೆಯಲು ಕಾಂಗ್ರೆಸ್ ಲೆಕ್ಕಾಚಾರ ರೂಪಿಸಿದ್ದು, ಮತದಾರ ಏನು ನಿರ್ಧರಿಸಿದ್ದಾನೆ ಎನ್ನುವುದು ಇಂದು ತೀರ್ಮಾನವಾಗಲಿದೆ.