ನವದೆಹಲಿ: 2024ರ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಪರಿಗಣಿಸಲಾದ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತಎಣಿಕೆ ಭಾನುವಾರ (ಡಿ.03) ಬೆಳಗ್ಗೆ ಆರಂಭಗೊಂಡಿದ್ದು, ಈವರೆಗಿನ ಟ್ರೆಂಡ್ ಪ್ರಕಾರ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಜನಾದೇಶ ಲಭಿಸಲಿದ್ದು, ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್ ಎಸ್ ಗೆ ಮುಖಭಂಗವಾಗಿದ್ದು, ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುತ್ತಾ ದಾಪುಗಾಲಿಟ್ಟಿದೆ.
ಇದನ್ನೂ ಓದಿ:Viral Video: ಮೃತ ತಂದೆಯ ಫೋಟೋ ಫ್ರೇಮ್ ಮುಂದೆ ಮಗಳ ʼಡಾಗ್ ಫಿಲ್ಟರ್ʼ ಸ್ನ್ಯಾಪ್
ಸೋಮವಾರ (ಡಿ.4) ಮಿಜೋರಾಂ ವಿಧಾನಸಭಾ ಚುನಾವಣೆಯ ಮತಎಣಿಕೆ ನಡೆಯಲಿದೆ. ರಾಜಸ್ಥಾನದಲ್ಲಿ ಆಡಳಿತಾರೂಢ ಕಾಂಗ್ರೆಸ್ ಗೆ ರಾಜಸ್ಥಾನ ಮತ್ತು ಛತ್ತೀಸ್ ಗಢದಲ್ಲಿ ಭಾರೀ ಮುಖಭಂಗ ಅನುಭವಿಸಿದೆ. ಮಧ್ಯಪ್ರದೇಶದಲ್ಲಿಯೂ ಕಾಂಗ್ರೆಸ್ ಹೀನಾಯ ಸೋಲು ಕಂಡಿದ್ದು, ತೆಲಂಗಾಣದಲ್ಲಿ ಮಾತ್ರ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿದೆ.
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಕಳೆದ ಚುನಾವಣೆಗಿಂತ ಈ ಬಾರಿ 49 ಸ್ಥಾನ ಕಳೆದುಕೊಂಡಂತಾಗಿದ್ದು, ರಾಜಸ್ಥಾನದಲ್ಲಿ ಕಾಂಗ್ರೆಸ್ ಕಳೆದ ಬಾರಿಗಿಂತ 30 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಛತ್ತೀಸ್ ಗಢದಲ್ಲಿ ಈ ವಿಧಾನಸಭಾ ಚುನಾವಣೆಯಲ್ಲಿ 32 ಸ್ಥಾನ ಕಳೆದುಕೊಂಡಿದೆ. ಇದರೊಂದಿಗೆ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 2 ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದ್ದು, ಮಧ್ಯಪ್ರದೇಶದಲ್ಲಿಯೂ ಅಧಿಕಾರದ ಗದ್ದುಗೆ ಏರುವ ಕನಸು ಭಗ್ನಗೊಳ್ಳುವ ಮೂಲಕ ಹೀನಾಯ ಮುಖಭಂಗ ಅನುಭವಿಸಿದೆ.
ಫಲಿತಾಂಶದ ಟ್ರೆಂಡ್ ಪ್ರಕಾರ ಮಧ್ಯಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ 164 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 64 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ರಾಜಸ್ಥಾನದಲ್ಲಿ ಭಾರತೀಯ ಜನತಾ ಪಕ್ಷ 112 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಆಡಳಿತಾರೂಢ ಕಾಂಗ್ರೆಸ್ 68 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಮುಖಭಂಗ ಅನುಭವಿಸಿದೆ. ಛತ್ತೀಸ್ ಗಢದಲ್ಲಿ ಭಾರತೀಯ ಜನತಾ ಪಕ್ಷ 54 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಆಡಳಿತಾರೂಢ ಕಾಂಗ್ರೆಸ್ 35 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರದ ಗದ್ದುಗೆಯಿಂದ ಕೆಳಗಿಳಿಯುವಂತಾಗಿದೆ. ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್ ಎಸ್ 42 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 62 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರದ ಗದ್ದುಗೆ ಏರಲು ಸಿದ್ಧವಾಗಿದೆ.