Advertisement

ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ಚುನಾವಣೆ

06:45 AM Jun 02, 2019 | Team Udayavani |

ಬೆಳಗಾವಿ: ರಾಜ್ಯದಲ್ಲಿನ ಈಗಿನ ರಾಜಕೀಯ ಬೆಳವಣಿಗೆ ಗಮನಿಸಿದರೆ ಯಾವುದೇ ಕ್ಷಣದಲ್ಲಿ ಮತ್ತೆ ಚುನಾವಣೆ ಎದುರಾಗುವ ಸಾಧ್ಯತೆ ಇದ್ದು, ಬಿಜೆಪಿ ಅದನ್ನು ಎದುರಿಸಲು ಸನ್ನದ್ಧವಾಗಿದೆ ಎಂದು ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಭವಿಷ್ಯ ನುಡಿದರು.

Advertisement

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರಕಾರದ ಅಳಿವು, ಉಳಿವು ಎರಡೂ ಬೆಳಗಾವಿಯ ಕೈಯಲ್ಲಿ ಇದೆ ಎಂದು ಮಾರ್ಮಿಕವಾಗಿ ಹೇಳಿದರು. ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಮಾಡುವ ಶಕ್ತಿ ಬೆಳಗಾವಿಗೆ ಇದೆ ಎಂದರು.

ನರೇಂದ್ರ ಮೋದಿ ನೇತೃತ್ವದ ಸರಕಾರದಲ್ಲಿ ಕೇಂದ್ರದಲ್ಲಿ ಸುರೇಶ ಅಂಗಡಿಗೆ ರಾಜ್ಯ ರೈಲ್ವೆ ಖಾತೆ ನೀಡಿರುವುದು ಸಂತೋಷದ ವಿಷಯ. ಮುಂದಿನ ದಿನಗಳಲ್ಲಿ ಸುರೇಶ ಅಂಗಡಿ ನೇತೃತ್ವದಲ್ಲಿ ಈ ಭಾಗದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯಲಿ ಎಂದು ಹಾರೈಸಿದರು.

ಕೇಂದ್ರ ಸಚಿವ ಸಂಪುಟದಲ್ಲಿ ಇನ್ನೂ 40 ಸಚಿವ ಸ್ಥಾನಗಳು ಖಾಲಿ ಉಳಿದಿದ್ದು, ಹೈದರಾಬಾದ್‌-ಕರ್ನಾಟಕ ಭಾಗಕ್ಕೆ ಸಚಿವ ಸ್ಥಾನ ನೀಡುವಂತೆ ಕೋರಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next