ಚೆನ್ನೈ/ಹೈದರಾಬಾದ್: ಮುಂದಿನ ಲೋಕಸಭೆ ಚುನಾವಣೆಗಾಗಿ ಸಿದ್ಧತೆ ಆರಂಭಿಸಿರುವ ಬಿಜೆಪಿ, ದೇಶಾದ್ಯಂತ ಹಲವು ರಣತಂತ್ರಗಳನ್ನು ರೂಪಿಸುತ್ತಿದೆ. ಅದಕ್ಕೆ ಪೂರಕವಾಗಿ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಬುಧವಾರ ಒಡಿಶಾ ಪ್ರವಾಸ ಕೈಗೊಳ್ಳಲಿದ್ದಾರೆ.
ಪುರಿ ಮತ್ತು ಕಂಧಮಾಲ್ ಲೋಕಸಭಾ ಕ್ಷೇತ್ರಗಳಲ್ಲಿ ಆಯೋಜಿಸಲಾಗಿರುವ ಎರಡು ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ನಡ್ಡಾ ಅವರು 2 ಕ್ಷೇತ್ರಗಳ ಸ್ಥಳೀಯ ಮುಖಂಡರ ಜತೆಗೆ ಮಾತುಕತೆ ನಡೆಸಲಿದ್ದಾರೆ.
ತಮಿಳುನಾಡಿನ ಕೊಯಮತ್ತೂರು ಸಹಿತ ಹಲವು ಲೋಕಸಭಾ ಕ್ಷೇತ್ರಗಳಲ್ಲಿಯೂ ಕೂಡ ಪಕ್ಷವನ್ನು ಬಲವರ್ಧಿಸಲು ನಡ್ಡಾ ಅವರು ಮಂಗಳವಾರ ಸರಣಿ ಸಭೆಗಳನ್ನು ನಡೆಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಅಂತರದಲ್ಲಿ ಸೋತ ಮತ್ತು ಗೆದ್ದಿರುವ 144 ಲೋಕಸಭಾ ಕ್ಷೇತ್ರಗಳನ್ನು ಕೇಂದ್ರೀಕರಿಸಿ ಈ ಪ್ರವಾಸ ಕೈಗೊಳ್ಳಲಾಗುತ್ತಿದೆ.
2 ದಿನಗಳ ಸಭೆ: ಕರ್ನಾಟಕ ಸಹಿತ ದಕ್ಷಿಣ ಭಾರತ ರಾಜ್ಯಗಳ 80 ಲೋಕಸಭಾ ಕ್ಷೇತ್ರದ ಬಿಜೆಪಿ ನಾಯಕರ 2 ದಿನಗಳ ಸಭೆ ಬುಧವಾರದಿಂದ ಹೈದರಾಬಾದ್‌ನಲ್ಲಿ ಆರಂಭವಾಗಲಿದೆ.
-ಬಿಜೆಪಿ ಸಂಘಟನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಭಾಗವಹಿಸಲಿದ್ದಾರೆ.