ಉಡುಪಿ: ಬಿಜೆಪಿ ಕಾರ್ಯಕರ್ತರ ಶಕ್ತಿಯನ್ನು ನೆಚ್ಚಿಕೊಂಡು ಅಖಾಡಕ್ಕೆ ಇಳಿದಿದ್ದೇನೆ. ಈ ಬಾರಿ ಯದು ನನ್ನ ರಾಜಕೀಯ ಪುನರ್ಜನ್ಮದ ಚುನಾವಣೆ ಎಂದು ಮಾಜಿ ಶಾಸಕ, ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ರಘುಪತಿ ಭಟ್ ಹೇಳಿದರು.
ಎ. 23ರಂದು ನಾಮಪತ್ರ ಸಲ್ಲಿಕೆಗೆ ಮುನ್ನ ಉಡುಪಿಯ ಚಿತ್ತರಂಜನ್ ಸರ್ಕಲ್‌ನಲ್ಲಿ ನಡೆದ ಉಡುಪಿ ವ್ಯಾಪ್ತಿಯ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಅವರು ಮಾತನಾಡಿದರು.
ನನ್ನೆದುರು ಚುನಾವಣೆ ಎದುರಿಸ ಲಾಗದವರು 2013ರಲ್ಲಿ ನಾನು ಅಖಾಡದಲ್ಲಿ ಇರಬಾರದು ಎನ್ನುವ ದೃಷ್ಟಿಯಿಂದ ಕುತಂತ್ರದ ಹೀನ ರಾಜಕಾರಣ ಮಾಡಿದರು. ನಾನು ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮಾಡಿ ಗೆದ್ದರು. ಈ ವಿಧಾನಸಭೆ ಗೆಲುವಿನ ಬಳಿಕ ಉಡುಪಿ ನಗರಸಭೆ ಬಿಜೆಪಿ ಪಾಲಾಗುವತ್ತ ಹಾಗೂ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನತ್ತ ಹೋರಾಟ ಮುಂದುವರಿಯುತ್ತದೆ ಎಂದರು.
ಹಕ್ಕುಪತ್ರಕ್ಕೆ ಯತ್ನ: ಪೂಜಾರಿ
ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ವಿಧಾನಸಭೆ ಚುನಾವಣೆ ಯಲ್ಲೂ ಬಿಜೆಪಿಗೆ ಮತ ನೀಡಿ ಮೋದಿ ಕೈ ಬಲಪಡಿಸಬೇಕು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷ ಯಶಪಾಲ್ ಎ. ಸುವರ್ಣ, ಮುಖಂಡ ಬಿ. ಸುಧಾಕರ ಶೆಟ್ಟಿ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ರಾಜ್ಯ ಬಿಜೆಪಿ ಕಾರ್ಯದರ್ಶಿ ಶ್ಯಾಮಲಾ ಕುಂದರ್, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ನಗರಸಭೆ ಮಾಜಿ ಅಧ್ಯಕ್ಷ ದಿನಕರ ಶೆಟ್ಟಿ ಹೆರ್ಗ, ಶ್ರೀಶ ನಾಯಕ್, ಪ್ರತಾಪ್ ಹೆಗ್ಡೆ ಮಾರಾಳಿ, ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.
ನಗರ ಬಿಜೆಪಿ ಅಧ್ಯಕ್ಷ ಪ್ರಭಾಕರ ಪೂಜಾರಿ ಸ್ವಾಗತಿಸಿ ಮಾಜಿ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ ಕಾರ್ಯಕ್ರಮ ನಿರೂಪಿಸಿದರು.