Advertisement

ಬೆದರಿಕೆ, ಆತಂಕದಲ್ಲಿ ಚುನಾವಣೆ: ಆಳ್ವಾ

06:40 AM Apr 11, 2019 | Team Udayavani |

ಹುಬ್ಬಳ್ಳಿ: ಭಯ, ಬೆದರಿಕೆ ಹಾಗೂ ಆತಂಕದಲ್ಲಿ ದೇಶದ ಚುನಾವಣೆ ನಡೆಯುತ್ತಿದ್ದು, ಈ ಎಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿರುವ ಚುನಾವಣಾ ಆಯೋಗ ಕಂಡೂ ಕಾಣದಂತಿದೆ ಎಂದು ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್‌ ಆಳ್ವಾ ಆರೋಪಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್‌ ಹಾಗೂ ಇತರೆ ಪಕ್ಷದ ನಾಯಕರನ್ನು ಬೆದರಿಸುವ ತಂತ್ರಗಾರಿಕೆ ಪ್ರಧಾನಿ ಮೋದಿ ಹಾಗೂ ಅವರ ತಂಡ ಮಾಡುತ್ತಿದೆ. ಸಾಂವಿಧಾನಿಕ ಸಂಸ್ಥೆಗಳ ಮೂಲಕ ಕಾಂಗ್ರೆಸ್‌ ಹಾಗೂ ಇತರೆ ಪಕ್ಷದ ನಾಯಕರ ಕಚೇರಿ, ಮನೆಗಳ ಮೇಲೆ ದಾಳಿ ನಡೆಸಿ ಮಾನಸಿಕ ಹಿಂಸೆ ನೀಡುವ ಕೆಲಸ ನಡೆಯುತ್ತಿದೆ. ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆಗಳು ನಡೆಯುತ್ತಿದ್ದರೂ ಚುನಾವಣಾ ಆಯೋಗ ಮೌನ ವಹಿಸಿದೆ ಎಂದರು.

ಮೋದಿ ಅವರ ಭಾಷಣ ಸಂಪೂರ್ಣವಾಗಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ. ಸೈನಿಕರ ಕಾರ್ಯಾಚರಣೆಯನ್ನು ಪ್ರಚಾರಕ್ಕೆ ಬಳಸಿಕೊಳ್ಳದಂತೆ ಆಯೋಗ ಸ್ಪಷ್ಟವಾಗಿ ಹೇಳಿದ್ದರೂ ಪಾಲನೆಯಾಗುತ್ತಿಲ್ಲ. ಈ ಕುರಿತು ಕಾಂಗ್ರೆಸ್‌ ಪಕ್ಷ ಗಂಭೀರ ವಿರೋಧ ಮಾಡಿ ಚುನಾವಣೆ ಆಯೋಗಕ್ಕೆ ದೂರು ನೀಡಿದರೂ ಯಾವುದೇ ಕ್ರಮವಾಗುತ್ತಿಲ್ಲ. ವಿರೋಧ ಪಕ್ಷದ ನಾಯಕರು ಸೇರಿದಂತೆ ಪ್ರಮುಖ ಹುದ್ದೆಗಳಲ್ಲಿರುವ ಅಧಿಕಾರಿಗಳು ಹೆದರಿಕೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next