Advertisement

ಚುನಾವಣೆಗೆ ಇವಿಎಂ ಬದಲು ಮತಪತ್ರವಿರಲಿ

07:55 AM Dec 15, 2017 | Team Udayavani |

ಬೆಂಗಳೂರು: ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಇವಿಎಂ ಬದಲಿಗೆ ಮತಪತ್ರಗಳನ್ನೇ ಬಳಕೆ ಮಾಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಒತ್ತಾಯಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಇವಿಎಂ ಮತಯಂತ್ರಗಳ ಬಗ್ಗೆ ದೇಶಾದ್ಯಂತ ಸಂಶಯ ವ್ಯಕ್ತವಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮತಪತ್ರಗಳನ್ನೇ ಬಳಕೆ ಮಾಡಬೇಕೆಂದು ಆಗ್ರಹಿಸಿದರು. ಈ ಸಂಬಂಧ ಸದ್ಯದಲ್ಲಿಯೇ ಕೇಂದ್ರ ಚುನಾವಣಾ ಆಯೋಗಕ್ಕೆ ಪ್ರದೇಶ ಕಾಂಗ್ರೆಸ್‌ ವತಿಯಿಂದ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

Advertisement

ಕಾಂಗ್ರೆಸ್ಸಿನಲ್ಲಿ ಭಿನ್ನಮತವಿಲ್ಲ: ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಮತ ಇಲ್ಲ. ಮುಖ್ಯಮಂತ್ರಿಯವರ ಯಾತ್ರೆ ಹಾಗೂ ನಮ್ಮ ಯಾತ್ರೆಯಿಂದ ಕಾರ್ಯಕರ್ತರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಪ್ರತ್ಯೇಕ ಯಾತ್ರೆ ಸರಿಯಲ್ಲ ಎಂಬ ಹಿರಿಯ ನಾಯಕ ಜಾಫ‌ರ್‌ ಷರೀಪ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಹಿರಿಯ ಮುಖಂಡರ ಸಲಹೆ ಪಡೆಯುತ್ತೇವೆ. ಏನೇ ಮಾಡಿದರೂ ಒಟ್ಟಾಗಿಯೇ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.

ನಮ್ಮದು ರಾಷ್ಟ್ರೀಯ ಪಕ್ಷ, ಎಲ್ಲ ಜಿಲ್ಲೆಗಳಿಗೆ ವೀಕ್ಷಕರನ್ನು ಕಳುಹಿಸುತ್ತೇವೆ. ಅದರ ವರದಿ ನಮ್ಮ ಕೈ ಸೇರಿದ ಬಳಿಕ ಪಟ್ಟಿ
ಸಿದ್ಧವಾಗುತ್ತದೆ. ಚುನಾವಣೆಗೆ ಟಿಕೆಟ್‌ ನೀಡುವ ವಿಚಾರದಲ್ಲಿ ಹೈಕಮಾಂಡ್‌ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next