Advertisement

58 ನಗರ ಸ್ಥಳೀಯ ಸಂಸ್ಥೆಗಳಿಗೆ ಇಂದು ಚುನಾವಣೆ

12:04 AM Dec 27, 2021 | Team Udayavani |

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ಮತ್ತು ವಿಟ್ಲ  ಪಟ್ಟಣ ಪಂಚಾಯತ್‌ ಹಾಗೂ ಉಡುಪಿಯ ಕಾಪು ಪುರಸಭೆ ಸೇರಿದಂತೆ ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಸೋಮವಾರ (ಡಿ. 27) ಮತದಾನ ನಡೆಯಲಿದೆ. ವಿವಿಧ ಪಕ್ಷಗಳ 3,440 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

Advertisement

5 ನಗರಸಭೆ, 19 ಪುರಸಭೆ, 34 ಪಟ್ಟಣ ಪಂಚಾಯತ್‌ ಸಹಿತ ಒಟ್ಟು 58 ನಗರ ಸ್ಥಳೀಯ ಸಂಸ್ಥೆಗಳ 1,185 ವಾರ್ಡ್‌ಗಳಲ್ಲಿ ಬೆಳಗ್ಗೆ  7ರಿಂದ ಸಂಜೆ 5ರ ತನಕ ಮತದಾನ ನಡೆಯಲಿದೆ. 1,577 ಮತಗಟ್ಟೆ ಗಳನ್ನು ಸ್ಥಾಪಿಸಲಾಗಿದೆ. ವಿವಿಧ ಕಾರಣಗಳಿಗೆ ತೆರ ವಾಗಿರುವ ವಿವಿಧ ನಗರ ಸ್ಥಳೀಯ ಸಂಸ್ಥೆಗಳ 9 ವಾರ್ಡ್‌ಗಳಿಗೂ ಇದೇ ವೇಳೆ ಉಪಚುನಾವಣೆ ನಡೆ ಯಲಿದೆ. 5,138 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ ದ್ದರು. ಅಂತಿಮವಾಗಿ ಬಿಜೆಪಿಯ 1,048, ಕಾಂಗ್ರೆಸ್‌ನ 1,047, ಜೆಡಿಎಸ್‌ನ 244 ಹಾಗೂ ಪಕ್ಷೇತರರು 910 ಸೇರಿ ಒಟ್ಟು 3,440 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಡಿ. 30ರಂದು ಫ‌ಲಿತಾಂಶ ಪ್ರಕಟವಾಗಲಿದೆ.

ನಗರ ಸ್ಥಳೀಯ ಸಂಸ್ಥೆಗಳ ಮತದಾನಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳ ಲಾಗಿದೆ. ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಂಡು ಅಗತ್ಯ ಸೂಚನೆಗಳನ್ನು ನೀಡ ಲಾಗಿದೆ. ಕೋವಿಡ್‌ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲು ತಾಕೀತು ಮಾಡಲಾಗಿದೆ. -ಡಾ| ಬಿ. ಬಸವರಾಜು, ರಾಜ್ಯ ಚುನಾವಣ ಆಯುಕ್ತ

Advertisement

Udayavani is now on Telegram. Click here to join our channel and stay updated with the latest news.

Next