Advertisement

29ಕ್ಕೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ

03:50 PM May 04, 2019 | Team Udayavani |

ತುಮಕೂರು: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಮುಗಿದು ರಾಜಕೀಯ ಪಕ್ಷಗಳ ಮುಖಂಡರು ರಿಲ್ಯಾಕ್ಸ್‌ ಮೂಡ್‌ನ‌ಲ್ಲಿ ಇದ್ದು ಲೋಕ ಸಮರದ ಫ‌ಲಿತಾಂಶದ ನಿರೀಕ್ಷೆಯಲ್ಲಿ ಇರುವಾಗ ಜಿಲ್ಲೆಯ ನಾಲ್ಕು ನಗರ, ಪಟ್ಟಣ ಸ್ಥ‌್ಧಳೀಯ ಸಂಸ್ಥೆಗಳ ಚುನಾವಣೆ ಮೇ 29 ರಂದು ನಡೆಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

Advertisement

ಎಲ್ಲೆಲ್ಲೆ ಚುನಾವಣೆ?:ರಾಜ್ಯ ಚುನಾವಣಾ ಆಯೋಗ ಜಿಲ್ಲೆಯ ತಿಪಟೂರು ನಗರಸಭೆ, ಕುಣಿಗಲ್ ಹಾಗೂ ಪಾವಗಡ ಪುರಸಭೆ, ತುರುವೇಕೆರೆ ಪಪಂ ಹಾಗೂ ತುಮಕೂರು ಮಹಾನಗರಪಾಲಿಕೆಯ 22ನೇ ವಾರ್ಡ್‌ಗೆ ಮೇ 29ರಂದು ಉಪ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.

ಚುನಾವಣಾ ವೇಳಾಪಟ್ಟಿ: ಸ್ಥಳೀಯ ನಗರ, ಪಟ್ಟಣ ಪ್ರದೇಶದ ಚುನಾವಣೆಗೆ ಸಂಬಂಧಿಸಿದಂತೆ ಮೇ 9ರಂದು ನೋಟಿಸ್‌ ಹೊರಡಿಸಲಾಗುವುದು. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಲು ಮೇ 16 ಕಡೆ ದಿನವಾಗಿದೆ.

31ಮತ ಎಣಿಕೆ:ಮೇ 17ರಂದು ನಾಮ ಪತ್ರಗಳ ಪರಿಶೀಲನೆ ನಡೆಸಲಾಗುವುದು. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಮೇ 20 ಕಡೆಯ ದಿನವಾಗಿದೆ. ಮತದಾನದ ಅವಶ್ಯವಿದ್ದರೆ ಮೇ 29ರ ಬೆಳಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ನಡೆಸಲಾಗುವುದು. ಮರು ಮತದಾನ ಇದ್ದಲ್ಲಿ ಮೇ 30ರ ಬೆಳಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ನಡೆಸಲಾಗುವುದು. ಮತ ಎಣಿಕೆ ಮೇ 31ರ ಬೆಳಗ್ಗೆ 8 ಗಂಟೆಗೆ ಆಯಾ ತಾಲೂಕು ಕೇಂದ್ರ ಸ್ಥಳಗಳಲ್ಲಿ ನಡೆಯಲಿದೆ.

ಶನಿವಾರವೂ ನಾಮಪತ್ರ ಸಲ್ಲಿಸಿ: ಚುನಾವಣೆ ನಡೆಯಲಿರುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಈಗಾಗಲೇ ಮೇ 2 ರಿಂದ ನೀತಿ ಸಂಹಿತೆ ಜಾರಿಯಲ್ಲಿದ್ದು, ಮೇ 31ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಅಭ್ಯರ್ಥಿಗಳು ಮೇ 11ರಂದು 2ನೇ ಶನಿವಾರವೂ ನಾಮಪತ್ರ ಸಲ್ಲಿಸಬಹು ದಾಗಿದೆ. ರಾಜಕೀಯ ಪಕ್ಷಗಳು ಮತ್ತು ಸಾರ್ವಜನಿಕರು ನೀತಿ ಸಂಹಿತೆ ಯಾವುದೇ ರೀತಿಯಲ್ಲೂ ಉಲ್ಲಂಘನೆ ಯಾಗದಂತೆ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ರಾಕೇಶ್‌ ಕುಮಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next