Advertisement

Electoral Bond Case: ನಿರ್ಮಲಾ, ನಡ್ಡಾ, ನಳಿನ್‌ ವಿರುದ್ದದ FIR ರದ್ದು ಮಾಡಿದ ಹೈಕೋರ್ಟ್‌

03:08 PM Dec 03, 2024 | Team Udayavani |

ಬೆಂಗಳೂರು: ಚುನಾವಣಾ ಬಾಂಡ್‌ ಹೆಸರಲ್ಲಿ ಸುಲಿಗೆ ಮಾಡಿದ್ದಾರೆಂದು ಬಿಜೆಪಿ ನಾಯಕರಾದ ನಿರ್ಮಲಾ ಸೀತಾರಾಮನ್,‌ ಜೆಪಿ ನಡ್ಡಾ, ನಳಿನ್‌ ಕುಮಾರ್‌ ಕಟೀಲ್ ವಿರುದ್ದ ದಾಖಲಾಗಿದ್ದ ಎಫ್‌ಐಆರ್ ನ್ನು ಹೈಕೋರ್ಟ್‌ ರದ್ದು ಮಾಡಿದೆ.

Advertisement

ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯ ಘಟಕಗಳು ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿ ಸುಲಿಗೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ತಿಲಕ್‌ ನಗರ ಠಾಣೆಯಲ್ಲಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ಜೆ ಪಿ ನಡ್ಡಾ ಮತ್ತಿತರರ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

ಎಫ್‌ಐಆರ್‌ ರದ್ದುಪಡಿಸಬೇಕು ಎಂದು ಕೋರಿ 4ನೇ ಆರೋಪಿಯಾದ ಮಾಜಿ ಸಂಸದ ಹಾಗೂ ಬಿಜೆಪಿಯ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಲ್ಲಿಸಿರುವ ಕ್ರಿಮಿನಲ್‌ ಅರ್ಜಿಯನ್ನು ಹೈಕೋರ್ಟ್ ಮಾನ್ಯ ಮಾಡಿದೆ.

ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ ಆದೇಶ ಪ್ರಕಟಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next