Advertisement

Electoral bonds; ಮೋದಿ ಭ್ರಷ್ಟಾಚಾರದ ಮತ್ತೊಂದು ಮುಖ ಬಯಲು:ಎಂ.ಬಿ.ಪಾಟೀಲ್

06:03 PM Apr 15, 2024 | Team Udayavani |

ವಿಜಯಪುರ : ಕಳೆದ 10 ವರ್ಷಗಳ ಅವಧಿಯ ಅಧಿಕಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡಿಲ್ಲ. ಬದಲಾಗಿ ಚುನಾವಣೆ ಬಾಂಡ್ ಹಗರಣದ ಮೂಲಕ ಇವರ ಮತ್ತೊಂದು ಮುಖ ಬಯಲಾಗಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆ ಬಾಂಡ್ ವಿಚಾರದಲ್ಲಿ ಮೋದಿ ಅವರ ಭ್ರಷ್ಟಾಚಾರದ ಮತ್ತೊಂದು ಮುಖವಾಡ ಬಯಲಾಗಿದೆ. ಸಿಬಿಐ, ಇಡಿ, ಐಟಿ ಹೀಗೆ ಸರ್ಕಾರಿ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡು ಆಡಳಿತ ನಡೆಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಅಬಕಾರಿ ಹಗರಣದಲ್ಲಿ ಬಂಧಿಸುವ ಮೂಲಕ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಆದರೆ ಇದೇ ಹಗರಣದಲ್ಲಿ ಬಿಜೆಪಿ ನಾಯಕರೂ ಭ್ರಷ್ಟಾಚಾರ ಎಸಗಿದ್ದನ್ನು ಮರೆತಿದ್ದಾರೆ ಎಂದರು.

ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಭರವಸೆ, ವಿದೇಶದಲ್ಲಿರುವ ಕಪ್ಪುಹಣ ಭಾರತಕ್ಕೆ ತರುವ ಭರವಸೆ ಈಡೇರಿಸಲಿಲ್ಲ. ಬದಲಾಗಿ ನೋಟ್ ಬ್ಯಾನ್‍ನಂಥ ಆರ್ಥಿಕ ಸಂಕಷ್ಟ ಸೃಷ್ಟಿಸಿ, ಬೆಲೆ ಏರಿಕೆ ಕೊಡುಗೆ ನೀಡಿದ್ದೇ ಇವರ ಸಾಧನೆ ಎಂದರು.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳ ಬಗ್ಗೆ ಜನರಲ್ಲಿ ಕಾಂಗ್ರೆಸ್ ಬಗ್ಗೆ ಭರವಸೆ ಮೂಡಿದ್ದು, ಕರ್ನಾಟಕದಲ್ಲಿ 20 ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ವಿಜಯಪುರ ಕ್ಷೇತ್ರದಲ್ಲೂ ಈ ಬಾರಿ ಕಾಂಗ್ರೆಸ್ ವಿಜಯ ಸಾಧಿಸಲಿದೆ ಎಂದರು.

ಕಾಂಗ್ರೆಸ್ ಆರೋ ದೀಪ ಆರೋ ಮುನ್ನ ಜೋರಾಗಿ ಉರಿಯುತ್ತದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆಗೆ ತಿರುಗೇಟು ನೀಡಿ, ‘ಅವರ ದೀಪ ಎಷ್ಟು ಬಾರಿ ಅರಿಸಲಾಗಿದೆ ಎಂದು ತಿಳಿದುಕೊಳ್ಳಲಿ. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಎನೆಲ್ಲಾ ಮಾಡಿದ್ದರೆಂದು ಅರಿಯುವ ಕೆಲಸ ಮಾಡಲಿ’ ಎಂದು ತಿರುಗೇಟು ನೀಡಿದರು.

Advertisement

ವಿಜಯೇಂದ್ರ ಅವರ ತಂದೆ ಯಡ್ಡಿಯೂರಪ್ಪ ಮುಖ್ಯಮಂತ್ರಿ ಆಗೋದನ್ನ ಎರಡು ಬಾರಿ ತಪ್ಪಿಸಿದ್ದಾರೆ. ಈ ಚುನಾವಣೆಗೆ ಬಳಕೆ ಮಾಡಿಕೊಳ್ಳಲು ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ. ವಿಜಯೇಂದ್ರ ಮೂರುವರ್ಷ ಮಾತ್ರ ಅಧ್ಯಕ್ಷರಾಗಿರುತ್ತಾರೆ ಎಂದು ಅವರದೇ ಪಕ್ಷದ ಪ್ರಹ್ಲಾದ್ ಜೋಶಿ ಹೇಳಿದ್ದಾರೆ ಎಂದು ಕುಟುಕಿದರು.

Advertisement

Udayavani is now on Telegram. Click here to join our channel and stay updated with the latest news.

Next