Advertisement

ವಿದ್ಯುತ್‌ ತಂತಿ ತಗುಲಿ ರೈತ ಸಾವು

11:52 AM Jan 23, 2022 | Team Udayavani |

ಕಲಬುರಗಿ: ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್‌ ತಂತಿ ತಗುಲಿ ರೈತನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕಾಳಗಿ ತಾಲೂಕಿನ ಮುಕರಂಬಾ ಗ್ರಾಮದಲ್ಲಿ ಶನಿವಾರ ನಡೆದಿದೆ.

Advertisement

ಶಿವಕುಮಾರ ಬಸಣೋರ (21) ಘಟನೆಯಲ್ಲಿ ಮೃತಪಟ್ಟ ರೈತ.

ತೋಟದಲ್ಲಿ ಕೈಗೆ ತಾಗುವಷ್ಟು ಮೇಲೆ ವಿದ್ಯುತ್‌ ತಂತಿ ಜೋತು ಬಿದ್ದಿದೆ. ಇದರಲ್ಲಿ ಕಳೆದ ಮೂರ್‍ನಾಲ್ಕು ವರ್ಷಗಳಿಂದ ವಿದ್ಯುತ್‌ ಸಂಪರ್ಕ ಇರಲಿಲ್ಲ. ಶನಿವಾರ ತಂತಿಯಲ್ಲಿ ವಿದ್ಯುತ್‌ ಪ್ರಸರಣವಾಗಿದೆ. ರೈತ ತನ್ನ ಬೆಳೆಗಳಿಗೆ ನೀರುಣಿಸುತ್ತಿರುವಾಗ ವಿದ್ಯುತ್‌ ತಂತಿ ಸ್ಪರ್ಷವಾಗಿ ಮೃತಪಟ್ಟಿದ್ದಾರೆ.

ವಿಷಯ ತಿಳಿದ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಬಂದರು. ಆದರೆ, ಜೆಸ್ಕಾಂ ಅಧಿಕಾರಿಗಳು ತುಂಬಾ ಹೊತ್ತಾದರೂ ಸ್ಥಳಕ್ಕೆ ಬರಲಿಲ್ಲ. ವಿದ್ಯುತ್‌ ತಂತಿ ತೆರವು ಮಾಡುವಂತೆ ಈ ಹಿಂದೆ ಅನೇಕ ಬಾರಿ ಮನವಿ ಮಾಡಲಾಗಿತ್ತು. ಆದರೂ, ಕ್ರಮ ಕೈಗೊಳ್ಳದೇ ಇದ್ದುದರಿಂದ ರೈತ ಮೃತಪಟ್ಟಿದ್ದಾನೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. ರಟಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next