Advertisement

Udupi:ಧರೆಗೆ ಉರುಳಿದ ವಿದ್ಯುತ್ ಕಂಬಗಳು

08:47 AM Jul 05, 2023 | Team Udayavani |

ಉಡುಪಿ : ನಗರದ ಮಂಚಿಕೋಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ ಸುರಿದ ಗಾಳಿ ಮಳೆಗೆ 7 ರಿಂದ 8 ವಿದ್ಯುತ್ ಕಂಬಗಳು ಧರೆಗೆ ಉರುಳಿವೆ.

Advertisement

ಈ ಭಾಗದಲ್ಲಿ ಮಂಗಳವಾರ ಸಂಜೆಯಿಂದಲೇ ವಿದ್ಯುತ್ ವ್ಯತ್ಯಯವಾಗಿದ್ದು, ಮೆಸ್ಕಾಂ ಸಿಬಂದಿ ಗಮನಕ್ಕೆ ತಂದರೂ ಸರಿಪಡಿಸಿಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಬುಧವಾರ ಬೆಳಗ್ಗೆಯಿಂದಲೇ ಮೆಸ್ಕಾಂ ಸಿಬಂದಿ ಕಾರ್ಯಚರಣೆಗೆ ಇಳಿದಿದ್ದಾರೆ. ಬಹುತೇಕ ವಿದ್ಯುತ್ ಕಂಬಗಳು ರಸ್ತೆಗೆ ವಾಲಿರುವುದಲ್ಲದೆ ತಂತಿಗಳು ಅಪಾಯಕಾರಿ ಸ್ಥಿತಿಯಲ್ಲಿವೆ. ಹೀಗಾಗಿ ಸಾರ್ವಜನರು‌ ಕೂಡ ಆತಂಕದಲ್ಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next