ಮಂಡ್ಯ: ಚಾರ್ಜ್ ಮಾಡುತ್ತಿದ್ದ ವೇಳೆ ಎಲೆಕ್ಟ್ರಿಕ್ ಸ್ಕೂಟರ್ ಒಂದು ಸ್ಫೋಟಗೊಂಡ ಅವಘಡ ಮದ್ದೂರು ತಾಲೂಕಿನ ವಳಗೆರೆಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಮುತ್ತುರಾಜ್ ಎಂಬುವರಿಗೆ ಸೇರಿದ್ದ ಕಳೆದ 6 ತಿಂಗಳ ಹಿಂದೆ ಖರೀದಿಸಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಪೋಟಗೊಂಡಿದೆ.
5 ಲಕ್ಷ ರೂ. ಮೌಲ್ಯದ ಗೃಹೋಪಯೋಗಿ ವಸ್ತುಗಳು ಮತ್ತು ಉಪಕರಣಗಳು ಸುಟ್ಟುಹೋಗಿದ್ದು, ಕುಟುಂಬದ ಐವರು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಮನೆಯೊಳಗೆ ಚಾರ್ಜ್ ಆಗುತ್ತಿದ್ದ ಎಲೆಕ್ಟ್ರಿಕ್ ಸ್ಕೂಟರ್ ಪ್ಲಗ್ ಇನ್ ಮಾಡಿದ ಕೆಲವೇ ನಿಮಿಷಗಳಲ್ಲಿ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ.
ಅಗ್ನಿಶಾಮಕ ದಳದ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.