Advertisement

ವಿದ್ಯುತ್ ಶಾಕ್: ರಾಜ್ಯದಲ್ಲಿ ಯೂನಿಟ್ ಗೆ 30ಪೈಸೆ ಹೆಚ್ಚಳ?

11:06 AM Feb 14, 2022 | Team Udayavani |

ಬೆಂಗಳೂರು : ರಾಜ್ಯದ ಜನತೆಗೆ ಸರಕಾರ ವಿದ್ಯುತ್ ಶಾಕ್ ನೀಡುವುದು ಬಹುತೇಕ ನಿಶ್ಚಿತವಾಗಿದ್ದು ಪ್ರತಿ ಯುನಿಟ್ ಮೇಲೆ ೩೦ ಪೈಸೆ ಹೆಚ್ಚಳ ಮಾಡುವ ಸಾಧ್ಯತೆ ಇದೆ.

Advertisement

ವಿದ್ಯುತ್ ದರ ಏರಿಕೆಗೆ ಸಂಬಂಧಪಟ್ಟಂತೆ ಎಲ್ಲ ಎಸ್ಕಾಂಗಳಿಂದ ಕೆಇಆರ್ ಸಿಗೆ ಪ್ರಸ್ತಾಪ ಸಲ್ಲಿಕೆಯಾಗಿದೆ. ಈ ಸಂಬಂಧ ಕೆಇಆರ್ಸಿ ಸಾರ್ವಜನಿಕರು ಹಾಗೂ ಉದ್ಯಮಿಗಳಿಂದ ಆಕ್ಷೇಪಣೆ ಆಹ್ವಾನಿಸಿದ್ದು, ಕಳೆದ ಎರಡು ದಿನಗಳಿಂದ ಬೆಂಗಳೂರಿನ ಬೆಸ್ಕಾಂ ಕಚೇರಿಯಲ್ಲಿ ವಿಚಾರಣೆಯೂ ಆರಂಭವಾಗಿದೆ.

ಪ್ರತಿ ಯೂನಿಟ್‍ಗೆ ೧.೫೦ ಪೈಸೆ ಹೆಚ್ಚಳಕ್ಕೆ ಹೆಸ್ಕಾಂಗಳು ಪ್ರಸ್ತಾಪ ಸಲ್ಲಿಸಿವೆ. ಇದರಲ್ಲಿ ಗೃಹ ಬಳಕೆ ಹಾಗೂ ವಾಣಿಜ್ಯ ಎಂದು ಎರಡು ವಿಭಾಗವಿದ್ದು, ಗೃಹ ಬಳಜೆ ವಿದ್ಯುತ್ ದರ ಪ್ರತಿ ಯುನಿಟ್ ಗೆ 30 ಪೈಸೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಕೆಈಆರ್ ಸಿ ಮೂಲಗಳಿಂದ ತಿಳಿದು ಬಂದಿದೆ.

ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ವಿದ್ಯುತ್ ದರ ಪರಿಷ್ಕರಣೆಯಾಗುವ ಸಾಧ್ಯತೆ. ರಾಜ್ಯದಲ್ಲಿ ವಿದ್ಯುತ್ ವ್ಯವಸ್ಥೆಯನ್ನು ಸುಧಾರಿಸಲಾಗುತ್ತಿದ್ದು ಇದಕ್ಕಾಗಿ ದರ ಪರಿಷ್ಕರಣೆ ಮಾಡುವುದು ಅನಿವಾರ್ಯ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಬಹುದು.

Advertisement

Udayavani is now on Telegram. Click here to join our channel and stay updated with the latest news.

Next