Advertisement

Tumkur: ಆಟವಾಡುತ್ತಿದ್ದಾಗ ವಿದ್ಯುತ್ ಹರಿದು ಇಬ್ಬರು ಮಕ್ಕಳ ದಾರುಣ ಸಾವು

01:57 PM Apr 20, 2023 | Team Udayavani |

ತುಮಕೂರು: ಆಟವಾಡುತ್ತಿದ್ದ ಇಬ್ಬರು ಮಕ್ಕಳಿಗೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿರುವ ಧಾರಣ ಘಟನೆ ತುಮಕೂರು ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ.

Advertisement

ಯತೀಶ್ (14) ಹಾಗೂ ಪ್ರಜ್ವಲ್(14) ಮೃತಪಟ್ಟ ಬಾಲಕರು.

ಮನೆ ಮೇಲೆ ಆಟವಾಡುತ್ತಿದ್ದ ಇಬ್ಬರು ಬಾಲಕರು ಗುರುವಾರ ಮನೆಗೆ ಹೊಂದಿಕೊಂಡಂತೆ ಇದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಮುಟ್ಟಿದ ಪರಿಣಾಮ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಾಲಕರ ಸಾವಿಗೆ ಬೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next