ವಿಜಯಪುರ: ನಲತವಾಡದಲ್ಲಿ ಶನಿವಾರ ಸಂಜೆ ಬೀಸಿದ ಬಿರುಗಾಳಿಗೆ ವಿದ್ಯುತ್ ತಂತಿ ತುಂಡಾಗಿ ಟೀ ಅಂಗಡಿಯ ಮೇಲೆ ಬಿದ್ದ ಪರಿಣಾಮ ಏಳು ಮಂದಿ ವಿದ್ಯುತ್‌ಆಘಾತಕ್ಕೆ ಸಿಲುಕಿದ್ದು, ಆ ಪೈಕಿ ಓರ್ವ ಸಾವನ್ನಪ್ಪಿದ್ದು, ಐವರ ಸ್ಥಿತಿ ಚಿಂತಾಜನಕವಾಗಿದೆ.
ಕಬ್ಬಿಣದ ತಗಡಿನ ಅಂಗಡಿಯಾದ ಕಾರಣ ವಿದ್ಯುತ್ ಪ್ರವಹಿಸಿದ್ದು, ಅಂಗಡಿಯಲ್ಲಿ ಚಹಾ ಸೇವಿಸುತ್ತಿದ್ದ ಏಳು ಮಂದಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರಗೆ ದಾಖಲಿಸಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಗದ್ದೆಪ್ಪ ಬಂಡಿವೆಡ್ಡರ (51)ಅವರು ಖಾಸಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದು, ಇನ್ನೋರ್ವ ಗಾಯಾಳು ಶಿವಣ್ಣ ಅವರ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೆಸ್ಕಾಂನ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.