Advertisement
ಪತ್ರಿಕಾ ಹೇಳಿಕೆ ನೀಡಿದ್ದು, ವಿದ್ಯುತ್ ಕ್ಷೇತ್ರವು ನಮ್ಮ ಸಂವಿಧಾನದ 7ನೇ ಶೆಡ್ಯೂಲ್‍ನಲ್ಲಿ ಸಮವರ್ತಿ ಪಟ್ಟಿಯಲ್ಲಿರುವ ಕಾರಣದಿಂದ ಇದರಲ್ಲಿ ಯಾವುದೆ ತಿದ್ದುಪಡಿ ತರಬೇಕಾದರೆ ರಾಜ್ಯಗಳ ಸಹಮತಿ ಕಡ್ಡಾಯ ಕುರಿತು ಶಾಸನಸಭೆಗಳಲ್ಲಿ ಚರ್ಚೆ ನಡೆಯಬೇಕು. ಆದರೆ ಕೇಂದ್ರ ಸರ್ಕಾರ ಒಕ್ಕೂಟ ತತ್ವಕ್ಕೆ ವಿರುದ್ಧವಾಗಿ ರಾಜ್ಯ ಸರ್ಕಾರಗಳಿಗೆ ಯಾವ ಮನ್ನಣೆಯನ್ನೂ ನೀಡದೆ ತಿದ್ದುಪಡಿ ತರಲು ಹೊರಟಿದೆ. ಜೊತೆಗೆ ಜನರ ಬದುಕಿನ ಮೇಲೆ ಪ್ರಭಾವ ಬೀರುವ ಯಾವುದೇ ಕಾಯ್ದೆಯ ಕುರಿತು ವ್ಯಾಪಕವಾಗಿ ಚರ್ಚೆ ಮಾಡಬೇಕು. ಆದರೆ ದೇಶವನ್ನು ಕೋವಿಡ್ ರೋಗವು ಬಾಧಿಸುತ್ತಿದ್ದಾಗ ಕರಡನ್ನು ಬಿಡುಗಡೆ ಮಾಡಿದ ಮೋದಿ ಸರ್ಕಾರ ಈಗ ಏಕಾಏಕಿ ಕಾಯ್ದೆಯನ್ನು ಸಂಸತ್ತಿನ ಮುಂದೆ ಮಂಡಿಸಿದೆ.ದೇಶದ ಜನರನ್ನು ಸಂಪೂರ್ಣವಾಗಿ ನಾಶಮಾಡುವ ಏಕೈಕ ಗುರಿ ಬಿಜೆಪಿ ಇದ್ದಂತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
Related Articles
Advertisement
ಸಣ್ಣ, ಗೃಹ ಕೈಗಾರಿಕೆಗಳಿಗೆ ಉಚಿತ ಅಥವಾ ರಿಯಾಯಿತಿ ದರದಲ್ಲಿ ವಿದ್ಯುತ್ ನೀಡಿದ್ದರಿಂದ ಇವುಗಳು ದೇಶದ ಕೋಟ್ಯಾಂತರ ಯುವಕರಿಗೆ ಉದ್ಯೋಗ, ಸ್ವಯಂ ಉದ್ಯೋಗ ನೀಡಿದ್ದವು. ಇಂದಿಗೂ ಕೂಡ ಶೇ.90 ರಷ್ಟು ಉದ್ಯೋಗವನ್ನು ಈ ಎರಡೆ ಕ್ಷೇತ್ರಗಳು ನೀಡಿವೆ. ಮೋದಿಯವರ ಸರ್ಕಾರದ ನೀತಿಗಳು ಈ ಎರಡೂ ಕ್ಷೇತ್ರಗಳ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿವೆ ಎಂದರು.
ಕೊಳವೆ ಬಾವಿಗಳಾದಿಯಾಗಿ ಎಲ್ಲ ಸಂಪರ್ಕಗಳಿಗೆ ಮೀಟರ್ ಅಳವಡಿಸಿ, ಪೂರ್ತಿ ಶುಲ್ಕ ವಸೂಲಿಗೆ ಮುಂದಾಗುತ್ತಾರೆ. ಆ ನಂತರ ಅವರ ಖಾತೆಗಳಿಗೆ ಸಬ್ಸಿಡಿಯನ್ನು ಮರುಪಾವತಿಸಲಾಗುವುದು ಎಂದು ಹೇಳುತ್ತಿದ್ದಾರೆ. ಆದರೆ ಮೋದಿ ಸರ್ಕಾರ ಅಡುಗೆ ಸಿಲಿಂಡರಿಗೂ ಇದೇ ರೀತಿ ಹೇಳಿತ್ತು. ನೇರವಾಗಿ ಜನರ ಖಾತೆಗಳಿಗೆ ಮರುಪಾವತಿಸುವುದಾಗಿ ಹೇಳಿ ಮೋಸ ಮಾಡಿದೆ ಎಂದರು.
ವಿದ್ಯುತ್ ಕ್ಷೇತ್ರದ ಮೇಲಿನ ಸಂಪೂರ್ಣ ನಿಯಂತ್ರಣ ಸರ್ಕಾರದ್ದೆ ಆಗಿರಬೇಕು. ಇಲ್ಲದಿದ್ದರೆ ದೇಶವು ಅಧೋಗತಿಗೆ ಇಳಿದು ಹೋಗುತ್ತದೆ. ದೇಶದ ಅಭಿವೃದ್ಧಿ ವೇಗದ ಪ್ರಧಾನ ಮೂಲ ವಿದ್ಯುತ್ ಆಗಿದೆ. ಇಂಥ ಮೂಲ ಶಕ್ತಿಯನ್ನು ಜನರಿಗೆ ಸುಲಭದ ದರದಲ್ಲಿ, ಅಗತ್ಯವಿರುವ ಕಡೆ ಉಚಿತವಾಗಿ ನೀಡಲು ಸಾಧ್ಯವಾಗದಿದ್ದರೆ ಅಂಥ ದೇಶವು ಅಭಿವೃದ್ಧಿಯಾಗಲು ಸಾಧ್ಯವಿಲ್ಲ ಎಂದಿದ್ದಾರೆ.
ಎರಡು ದಶಕಗಳಲ್ಲಿ ವಿದ್ಯುತ್ ಕ್ಷೇತ್ರಕ್ಕೆ ಹಿಂದಿನ ಸರ್ಕಾರಗಳು ಅಪಾರ ಪ್ರಮಾಣದ ಸಂಪನ್ಮೂಲಗಳನ್ನು ವಿನಿಯೋಗಿಸಿವೆ. ಪವರ್ ಗ್ರಿಡ್ ಕಾರ್ಪೊರೇಷನ್ ಮುಂತಾದ ಸರ್ಕಾರಿ ಸ್ವಾಮ್ಯದ ಕಂಪೆನಿಗಳ ಮೇಲೆ ಸರ್ಕಾರ ಹೂಡಿಕೆ ಮಾಡಿದೆ. ಅಗತ್ಯ ಹೂಡಿಕೆಯನ್ನೆಲ್ಲ ಮಾಡಿದ ಮೇಲೆ ಖಾಸಗಿಯವರಿಗೆ ವಹಿಸಲು ಹೊರಟಿರುವುದು ಪರಮ ಜನದ್ರೋಹಕ್ಕೆ ಮಾದರಿ ಎಂದಿದ್ದಾರೆ.
ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಕ್ಷೇತ್ರವನ್ನು ಕಾರ್ಪೊರೇಟ್ ಬಲಾಢ್ಯರಿಗೆ ಬಿಟ್ಟುಕೊಡಬಾರದು. ದೇಶದ ಪ್ರಗತಿಯ ಮೂಲವಾದ ವಿದ್ಯುತ್‍ನ ಮೇಲಿನ ನಿಯಂತ್ರಣವು ಸರ್ಕಾರಗಳ ಬಳಿಯೇ ಇರಬೇಕು. ಸರ್ಕಾರಗಳ ಬಳಿ ಇದ್ದರೆ ಮಾತ್ರ ಜನರಿಗೆ ಹಕ್ಕಿರುತ್ತದೆ. ಇಲ್ಲದಿದ್ದರೆ ಅದು ಅಂಗಡಿಯ ಸರಕಿನಂತಾಗುತ್ತದೆ. ಕಾರ್ಪೊರೇಟ್ ಕಂಪೆನಿಗಳು ಬಾಕಿ ಉಳಿಸಿಕೊಂಡಿರುವ ವಿದ್ಯುತ್ ಬಿಲ್ಲನ್ನು ವಸೂಲಿ ಮಾಡಬೇಕು. ಒಕ್ಕೂಟ ವ್ಯವಸ್ಥೆಯನ್ನು ದಮನಿಸಿ ಸರ್ವಾಧಿಕಾರಿ ಧೋರಣೆಯನ್ನು ಮೋದಿ ಸರ್ಕಾರ ಬಿಗಿಗೊಳಿಸುತ್ತಿದ್ದರೂ ರಾಜ್ಯದ ಬಿಜೆಪಿ ಸರ್ಕಾರವಾಗಲಿ, ಸಂಸದರುಗಳಾಗಲಿ ಒಂದಿಷ್ಟೂ ಪ್ರತಿಭಟಿಸದೆ ನಾಡಿನ ಜನರಿಗೆ ದ್ರೋಹ ಬಗೆಯಲಾಗುತ್ತಿದೆ. ಬಿಜೆಪಿಯ ಈ ಜನದ್ರೋಹಿ ಧೋರಣೆಯನ್ನು ಖಂಡಿಸಲೇಬೇಕಾಗಿದೆ. ಯಾವುದೇ ಕಾರಣಕ್ಕೂ ಇಂಥ ಕೆಟ್ಟ ಕಾನೂನನ್ನು ಜಾರಿಗೊಳಿಸಬಾರದೆಂದು ಒತ್ತಾಯಿಸಿದರು.