Advertisement

ಜೂನ್ ತಿಂಗಳಲ್ಲಿ ವಿದ್ಯುತ್ ಚಾರ್ಜಿಂಗ್ ಸೆಂಟರ್ ಅಭಿಯಾನ: ಸಚಿವ ಸುನೀಲ್ ಕುಮಾರ್

04:06 PM May 07, 2022 | Team Udayavani |

ಮೈಸೂರು: ಜೂನ್ ತಿಂಗಳಲ್ಲಿ ಇಡೀ ರಾಜ್ಯದಲ್ಲಿ ವಿದ್ಯುತ್ ಚಾಲೆಂಜ್ ಸೆಂಟರ್ ಗಳ ಅಭಿಯಾನವನ್ನು ಪ್ರಾರಂಭಿಸಿ 30ರೊಳಗಾಗಿ ಕರ್ನಾಟಕದಲ್ಲಿ ಸಾವಿರ ವಿದ್ಯುತ್ ಚಾರ್ಜಿಂಗ್ ಸೆಂಟರ್ ಆರಂಭ ಮಾಡಲಿದ್ದೇವೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಅವರು ತಿಳಿಸಿದರು.

Advertisement

ಕಡಕೋಳದ ಕೆಇಬಿಇಎ ತರಬೇತಿ ಕೇಂದ್ರದಲ್ಲಿ ವಿದ್ಯುತ್ ಚಾಲಿತ ವಾಹನಗಳು ಮತ್ತು ಅದರ ಚಾರ್ಜಿಂಗ್ ತಂತ್ರಜ್ಞಾನಗಳ ಕುರಿತು ವಿಚಾರ ಸಂಕಿರಣ ಹಾಗೂ ನೂತನವಾಗಿ ನಿರ್ಮಿಸಲಾಗಿರುವ ವಿದ್ಯುತ್ ಚಾಲಿತ ವಾಹನಗಳ ಚಾರ್ಜಿಂಗ್ ಕೇಂದ್ರದ ಉದ್ಘಾಟನೆಯನ್ನು ಮಾಡಿ ಮಾತನಾಡಿದರು.

ವಾಯು ಮಾಲಿನ್ಯವನ್ನು ನಿವಾರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಎಲೆಕ್ಷ್ರಿಕ್ ವಾಹನಗಳಿಗೆ ಉತ್ತೇಜನ ನೀಡಲಾಗುವುದು. ಎಲೆಕ್ಟಿಕ್ ವಾಹನಗಳ ಚಾರ್ಜಿಂಗ್ ಸ್ಟೆಷನ್ ಆರಂಭಿಸಲು ಸರ್ಕಾರದಿಂದ ಸಬ್ಸಿಡಿ ನೀಡಲಾಗುವುದು. ಕೇಂದ್ರ ಸರ್ಕಾರವು ಸಹ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಮೇಲೆ ಮಾತ್ರವಲ್ಲದೇ ಚಾರ್ಜಿಂಗ್ ಸ್ಟೇಷನ್‌ಗಳ ನಿರ್ಮಾಣದ ಮೇಲೂ ಆಕರ್ಷಕ ಸಬ್ಸಡಿಗಳನ್ನು ನೀಡುತ್ತಿದೆ. ಈಗಾಗಲೇ ಹೆಚ್ಚು ಸ್ಟೇಷನ್ ನಿರ್ಮಾಣ ಮಾಡಲು ಸಭೆಗಳನ್ನು ಮಾಡಿದ್ದೇವೆ. ಎಲ್ಲಾ ಜಿಲ್ಲಾ ಕೇಂದ್ರ, ರಾಷ್ಟ್ರೀಯ , ರಾಜ್ಯ ಹೆದ್ದಾರಿ, ಪ್ರವಾಸಿ ತಾಣಗಳಲ್ಲಿ ಚಾರ್ಜಿಂಗ್ ಸ್ಟೇಷನ್ ಮಾಡುವ ಬಗ್ಗೆ ನಿರ್ಧಾರ ಮಾಡಲಾಗಿದೆ ಎಂದರು.

ಇದನ್ನೂ ಓದಿ:ಮೃತಪಟವರಿಗೂ ಮೂರನೇ ಡೋಸ್‌ ಲಸಿಕೆ: ಇದು ಆರೋಗ್ಯ ಇಲಾಖೆಯ ಚಮತ್ಕಾರ!

ಸರ್ಕಾರಿ ಕಚೇರಿಗಳಲ್ಲಿ ಎಲೆಕ್ಟ್ರಿಕ್ ವಾಹನ ಉಪಯೋಗ ಮಾಡುವ ಕುರಿತು ಚಿಂತಿಸಲಾಗಿದೆ. ರಾಜ್ಯದ ಎಲ್ಲ ಭಾಗಗಳಲ್ಲಿ ಕೂಡ ವಿದ್ಯುತ್ ಚಾರ್ಜಿಂಗ್ ಸೆಂಟರ್ ಗಳನ್ನು ಪ್ರಾರಂಭ ಮಾಡಬೇಕು ಎಂಬ ಪೂರ್ವ ತಯಾರಿಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುತ್ತಿದ್ದೇವೆ ಎಂದು ಸುನೀಲ್ ಕುಮಾರ್ ಹೇಳಿದರು.

Advertisement

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಜಿ.ಟಿ ದೇವೇಗೌಡ, ತಾಂತ್ರಿಕ ನಿರ್ದೇಶಕ ಸೋಮಶೇಖರ್, ಎಂ.ಎಲ್.ಎ ಹರ್ಷವರ್ಧನ್,  ಎಂ.ಎಲ್. ಸಿ ಮಂಜೇಗೌಡ, ಲೆಕ್ಕಾಧಿಕಾರಿ ಸಂಘದ ಅಧ್ಯಕ್ಷರಾದ ಮಂಜಪ್ಪ ಹಾಗೂ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next