ಶಿವಮೊಗ್ಗ: ರಾಜ್ಯದಲ್ಲಿ ನಿರೀಕ್ಷಿತ ಮುಂಗಾರು ಆರಂಭವಾಗಿಲ್ಲವಾದರೂ ವಿದ್ಯುತ್ ಗೆ ತೊಂದರೆ ಇಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಶುಕ್ರವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯ ಶರಾವತಿ ನದಿಯ ಡ್ಯಾಂಗಳಿಗೆ ಭೇಟಿ ನೀಡಿದ್ದೇನೆ. ಇನ್ನೂ ನಿರೀಕ್ಷಿತ ಮುಂಗಾರು ಆರಂಭವಾಗಿಲ್ಲ.ಆಗಸ್ಟ್ ತಿಂಗಳಲ್ಲಿ ಜಲಾಶಯ ಭರ್ತಿಯಾಗುವ ನಿರೀಕ್ಷೆ ಇದೆ. ವಿದ್ಯುತ್ ಉತ್ಪಾದನೆಗೆ ಯಾವುದೇ ತೊಂದರೆ ಆಗದು ಎಂದು ತಿಳಿಸಿದ್ದಾರೆ.
ಮುಂಗಾರು ಸಂದರ್ಭದಲ್ಲಿ ಯಾವುದೆ ಅವಘಡ ಆಗದಂತೆ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದೇನೆ. ಮುಂಗಾರು ನಂತರ ಗ್ರೀನ್ ಎನರ್ಜಿ ಕುರಿತು ಚಿಂತನೆ ನಡೆಸಲಾಗಿದೆ. 7 ಜಿಲ್ಲೆಗಳಲ್ಲಿ ಈ ಯೋಜನೆಗೆ ಸರ್ವೆ ಆಗಿದೆ. ಹೈಬ್ರಿಡ್ ಪಾರ್ಕ್ ಯೋಜನೆಯಡಿ 1000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ ಆದ್ಯತೆ ನೀಡಲಾಗುತ್ತದೆ ಎಂದರು.
ಶಿವಮೊಗ್ಗ, ದಾವಣಗೆರೆ ಜಿಲ್ಲೆಯಲ್ಲಿ ಉಜ್ವಲ ಯೋಜನೆಯಲ್ಲಿ ನಡೆದ ಅವ್ಯವಹಾರದ ತನಿಖೆ ನಡೆದಿದೆ.ಈ ಕುರಿತು ಸಭೆ ನಡೆಸಿದ್ದೇನೆ, ವರದಿ ಬಂದ ನಂತರ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ : ಅರಣ್ಯ ಕ್ಷೀಣ: ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುತ್ತೇವೆ: ಲೋಕಾಯುಕ್ತ ನ್ಯಾ.ಪಾಟೀಲ