ರಾಮನಗರ: ಕೋವಿಡ್ ಮಹಾಮಾರಿಯ ಈ ಸಂದರ್ಭದಲ್ಲಿ ಬಡ, ಮಧ್ಯಮ ಕಟುಂಬಗಳು ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿ ರುವುದರಿಂದ ರಾಜ್ಯದ ಈ ವರ್ಗದ ಕುಟುಂಬಗಳ ವಿದ್ಯುತ್ ಬಿಲ್, ನೀರಿನ ಬಿಲ್, ಮನೆ ಕಂದಾಯ ಮನ್ನಾ ಮಾಡುವಂತೆ ಸಂಸದ ಡಿ.ಕೆ.ಸುರೇಶ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಈ ಸಂಬಂಧ ಪತ್ರ ಬರೆದಿರುವ ಅವರು, ಕೋವಿಡ್ ಕರ್ಫ್ಯೂ ಕಾರಣ ಬಡ ಮತ್ತು ಮಧ್ಯಮ ವರ್ಗದ ಕುಟುಂಬ ಮಾಸಿಕ ವೇತ ನ ಸಿಗದೆ, ದಿನನಿತ್ಯ ದುಡಿಯುವಂತಾಗಿದೆ. ಆರ್ಥಿಕ ಪ್ಯಾಕೇಜ್ ಎಲ್ಲರಿಗೂ ತಲುಪದೆ ಇರುವುದರಿಂದ ಈ ವರ್ಗದ ಕುಟುಂಬಗಳ 3 ತಿಂಗಳಿನ ವಿದ್ಯುತ್ ಬಿಲ್, ನೀರಿನ ಬಿಲ್ ಮತ್ತು 1 ವರ್ಷದ ಮನೆ ಕಂದಾಯ ಮನ್ನಾ ಮಾಡುವುದರಿಂದ ಸ್ಪಲ್ಪ ಮಟ್ಟಿನ ಪರಿಹಾರ ಒದಗಿಸಿ ಒತ್ತಡ ರಹಿತ ಜೀವನ ನಡೆಸಲು ಅನುಕೂಲ ಮಾಡಿಕೊಟ್ಟಂತಾಗುತ್ತದೆ.
ಜವಾ ಬ್ದಾರಿಯುತ ಸರ್ಕಾರ ಈ ಸಂಕಷ್ಟದ ಸಮಯದಲ್ಲಿ ಈ ಕುಟುಂಬಗಳು ಆರ್ಥಿಕ ಹೊರೆಯಿಂದ ಹೊರಬರಲು ಅನುಕೂಲ ಮಾಡಿಕೊಡಬೇಕು ಎಂದು ಸಂಸದರು ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ.
ಖರೀದಿ ಕೇಂದ್ರ ತೆರೆಯಿರಿ: ರಾಜ್ಯದಲ್ಲಿ ಕೋವಿಡ್ ಸೋಂಕು ಕಾರಣ ರೈತರು ತಾವು ಬೆಳೆದ ಬೆಳೆಗಳಿಗೆ ನ್ಯಾಯಯುತ ಬೆಲೆ ಮತ್ತು ವ್ಯವಸ್ಥಿತ ಮಾರುಕಟ್ಟೆ ಇಲ್ಲದೆ ಉತ್ಪನ್ನ ಮಾರಾಟ ಮಾಡಲು ತೊಂದರೆ ಅನುಭವಿಸುತ್ತಿ ದ್ದಾರೆ. ರೈತರು ತಮ್ಮ ಜೀವನೋಪಾಯಕ್ಕಾಗಿ ಬೆಳೆಯುವ ಬೆಳೆಗಳನ್ನೇ ಅವಲಂಬಿಸಿದ್ದಾರೆ.
ಸಾಲ-ಸೋಲ ಮಾಡಿ ಬೆಳೆ ಬೆಳೆದಿದ್ದಾರೆ. ಆದರೆ, ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಮತ್ತು ಮಾರುಕಟ್ಟೆ ಇಲ್ಲದೆ ಉತ್ಪನ್ನ ವ್ಯರ್ಥವಾಗು ತ್ತಿದೆ. ಹೀಗಾಗಿ ಸರ್ಕಾರ ತಕ್ಷಣ ತಾಲೂಕು ಕೇಂದ್ರಗಳು ಮತ್ತು ಅವಶ್ಯವಿರುವ ಸ್ಥಳಗಳಲ್ಲಿ ಎಂಎಸ್ಪಿ ಖರೀದಿ ಕೇಂದ್ರ ಸ್ಥಾಪಿಸಿ ರಾಜ್ಯದ ರೈತರು ತಮ್ಮ ಉತ್ಪನ್ನಗಳ ಮಾರಾಟಕ್ಕೆ ಅನುಕೂಲ ಕಲ್ಪಿಸಬೇಕು. ಅವರು ನೆಮ್ಮದಿ ಜೀವನ ನಡೆಸಲು ಅನುಕೂಲ ಕಲ್ಪಿಸಿಕೊಡಬೇಕು ಎಂದು ಸಂಸದ ಡಿ.ಕೆ.ಸುರೇಶ್ ಆಗ್ರಹಿಸಿದ್ದಾರೆ.