Advertisement
“ಉದಯವಾಣಿ” ಕಚೇರಿಯಲ್ಲಿ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತಾಡಿದ ಅವರು, ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆ ಮಾಡಲು ಸೋಲಾರ್ ಶಕ್ತಿಯನ್ನು ಬಳಸಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಪ್ರಧಾನಮಂತ್ರಿ ಕುಸುಮ್ (ಸಿ) ಯೋಜನೆ ಅಡಿಯಲ್ಲಿ ರಾಜ್ಯದ 1,500 ಕಡೆ ಒಟ್ಟಾರೆ 1 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯದ ಸೋಲಾರ್ ಫೀಡರ್ ಸ್ಥಾಪಿಸಲಾಗುತ್ತಿದೆ ಎಂದು ಹೇಳಿದರು. ಈ ಯೋಜನೆಯಿಂದಾಗಿ 3.5ಲಕ್ಷ ರೈತರಿಗೆ ಅನುಕೂಲವಾಗಲಿದೆ.
ಹೇಳಿದರು. ಇಂಧನ ಇಲಾಖೆ ಜಾರಿಗೆ ತಂದಿರುವ ಅಮೃತಜ್ಯೋತಿ ಯೋಜನೆ ಅಡಿ ರಾಜ್ಯದ ಎಸ್ಸಿ/ ಎಸ್ಟಿ ಕುಟುಂಬಗಳಿಗೆ ಉಚಿತವಾಗಿ 75 ಯುನಿಟ್ ವಿದ್ಯುತ್ ನೀಡಲು ನಿರ್ಧರಿಸಲಾಗಿದೆ. ಅದರಂತೆ ಆರಂಭಿಕವಾಗಿ 2 ಲಕ್ಷ ಕುಟುಂಬಗಳಿಗೆ ವಿದ್ಯುತ್ ನೀಡಲಾಗುವುದು. ಬಾಡಿಗೆ ಮನೆ ಯಲ್ಲಿ ವಾಸವಿರುವ ಎಸ್ಸಿ/ಎಸ್ಟಿ ಕುಟುಂಬಗಳೂ ಸಮರ್ಪಕ ದಾಖಲೆ ಸಲ್ಲಿಸಿ ಯೋಜನೆಯ ಪ್ರಯೋಜನ ಪಡೆಯಬಹುದು. ನವೆಂಬರ್ ನಲ್ಲಿ ಅರ್ಜಿ ಸ್ವೀಕಾರ ಸೇರಿ ಫಲಾನುಭವಿಗಳಲ್ಲಿನ
ಗೊಂದಲ ನಿವಾರಣೆಗೆ ಅಭಿಯಾನ ನಡೆಸಲಾಗುವುದು. ಯೋಜನೆಯಿಂದ 25ರಿಂದ 28 ಲಕ್ಷ ಕುಟುಂಬಗಳಿಗೆ ಅನುಕೂಲವಾಗಿದೆ ಎಂದು ವಿವರಿಸಿದರು.
Related Articles
Advertisement
ವಿದ್ಯುತ್ ಉತ್ಪಾದನೆ ಹೆಚ್ಚಳಕ್ಕೆ ಕ್ರಮರಾಜ್ಯದಲ್ಲಿ ವಾರ್ಷಿಕ ಸರಾಸರಿ 30 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದ್ದು, 14,800 ಮೆಗಾ ವ್ಯಾಟ್ ಬೇಡಿಕೆಯಿದೆ. ಮುಂದಿನ 10 ವರ್ಷಗಳಲ್ಲಿ 10 ಸಾವಿರ ಮೆಗಾ ವ್ಯಾಟ್ ಬೇಡಿಕೆ ಜಾಸ್ತಿಯಾಗುವ ನಿರೀಕ್ಷೆಯಿದ್ದು, ಅದಕ್ಕೆ ತಕ್ಕ ಹಾಗೆ 21 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಪ್ರಸಕ್ತ ಸಾಲಿನಲ್ಲಿ 2,500 ಕೋಟಿ ರೂ. ಮೊತ್ತದ ವಿದ್ಯುತ್ ಮಾರಾಟ ಮಾಡಲಾಗಿದೆ. ಅದರ ಜತೆಗೆ ತುಮಕೂರು, ಗದಗ, ಬಾಗಲಕೋಟೆ, ಚಿತ್ರದುರ್ಗ, ವಿಜಯಪುರ ಸೇರಿ ಇನ್ನಿತರ ಜಿಲ್ಲೆಗಳಲ್ಲಿ ಸೋಲಾರ್ ಮತ್ತು ವಿಂಡ್ ಮೂಲಕ ವಿದ್ಯುತ್ ಉತ್ಪಾದಿಸುವ ಹೈಬ್ರಿಡ್ ಪಾರ್ಕ್ ಸ್ಥಾಪಿಸಲಾಗುತ್ತದೆ. ಇನ್ನು ಮುಂದೆ ಕಲ್ಲಿದ್ದಲಿನಿಂದ ವಿದ್ಯುತ್ ಉತ್ಪಾದನೆ ಮಾಡುವ ವಿಧಾನವನ್ನು ಕಡಿಮೆ ಮಾಡಿ ಸೋಲಾರ್, ವಿಂಡ್ ಸೇರಿ ಪರಿಸರ ಸ್ನೇಹಿ ವಿದ್ಯುತ್ ಉತ್ಪಾದಿಸಲು ಹೆಚ್ಚಿನ ಗಮನ ಹರಿಸಲಾಗುವುದು ಎಂದು ಸಚಿವ ಸುನೀಲ್‌ಕುಮಾರ್ ಹೇಳಿದರು.