ಮಲ್ಪೆ: ತೋನ್ಸೆ ಹೂಡೆಯ ಸಾಲಿಹಾತ್ ಮಹಿಳಾ ಪದವಿ ಕಾಲೇಜು, ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಸೀÌಪ್ ಸಮಿತಿ ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆಯು ವಿದ್ಯಾರ್ಥಿ, ಸಿಬಂದಿ ವರ್ಗ ಹಾಗೂ ಪೋಷಕ ಬಂಧುಗಳಿಗಾಗಿ ಆಯೋಜಿಸಲಾಯಿತು.
ಉಡುಪಿ ತಾಲೂಕು ಪಂಚಾಯತ್ ಇಲಾಖೆಯ ಸಹಾಯಕ ನಿರ್ದೇಶಕ ಹರಿಕೃಷ್ಣ ಶಿವತ್ತಾಯ ಅವರು ಮಾತನಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಅತ್ಯಂತ ಪ್ರಮುಖ ಕಾರ್ಯ, ತಮ್ಮ ತಮ್ಮ ಆತ್ಮಸಾಕ್ಷಿಯಾಗಿ ಮತ ಚಲಾಯಿಸಬೇಕು, ಇತರರಿಗೂ ಮತದಾನ ಮಾಡುವಲ್ಲಿ ಪ್ರೇರೆಪಿಸಬೇಕು ಎಂದರು. ವಿದ್ಯಾರ್ಥಿಗಳಿಗೆ ಮತದಾನ ಮಾಡುವ ಎಂಬ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಕಲ್ಯಾಣಪುರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಶ್ ಮತಯಂತ್ರ ಪ್ರಾತ್ಯಕ್ಷಿಕೆ ನೆರವೇರಿಸಿದರು. ಕೆಮ್ಮಣ್ಣು ಗ್ರಾಮ ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿ ಮಾಲತಿ, ಕಾಲೇಜಿನ ಪ್ರಾಂಶುಪಾಲೆ ಡಾ| ಸಬೀನಾ, ಮುಖ್ಯ ಶಿಕ್ಷಕರಾದ ಸುನಂದಾ, ಲವಿನಾ ಕ್ಲಾರಾ, ಸಮೀನಾ ಮತ್ತಿತರು
ಉಪಸ್ಥಿತರಿದ್ದರು.
ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಆಸ್ಲಾಂ ಹೈಕಾಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.