Advertisement

ಸಾರ್ವಜನಿಕರಿಗೆ ವಿದ್ಯುನ್ಮಾನ ಮತಯಂತ್ರ ಮಾಹಿತಿ

08:18 AM Feb 17, 2019 | Team Udayavani |

ಕಲಬುರಗಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಅತ್ಯಂತ ಮಹತ್ವದ್ದಾಗಿದ್ದು, ನಾವು ಮಾಡುವ ಮತದಾನ ಅದೇ ಅಭ್ಯರ್ಥಿಗೆ ಸೇರುತ್ತದೆ ಎನ್ನುವುದನ್ನು ತಿಳಿಯುವುದು ಅತೀ ಮುಖ್ಯವಾಗಿದೆ. ಇದಕ್ಕಾಗಿ ಸಾರ್ವಜನಿಕರು ವಿದ್ಯುನ್ಮಾನ ಮತ ಯಂತ್ರದ ಮಾಹಿತಿ ಪಡೆಯುವುದು ಅವಶ್ಯಕ ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ತಿಳಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಸಾರ್ವಜನಿಕರಿಗೆ ವಿದ್ಯುನ್ಮಾನ ಮತ ಯಂತ್ರದ ಮಾಹಿತಿ ನೀಡಲು ಹಮ್ಮಿಕೊಂಡಿದ್ದ ಹ್ಯಾಂಡ್ಸ್‌ ಆನ್‌ ತರಬೇತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಾರಂಭಿಕವಾಗಿ ಯುವ ಮತದಾರರಿಗೆ,
ಶಿಕ್ಷಕರಿಗೆ ವಿದ್ಯುನ್ಮಾನ ಮತಯಂತ್ರದ ಕುರಿತು ತರಬೇತಿ ನೀಡಲಾಗುತ್ತಿದೆ. 

ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲ ಮತದಾರರಿಗೆ ತರಬೇತಿ ನೀಡಲು 10 ಮತಗಟ್ಟೆಗೊಬ್ಬರಂತೆ ಸೆಕ್ಟರ್‌ ಅಧಿಕಾರಿಗಳನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿರುವ 200 ಸೆಕ್ಟರ್‌ ಅಧಿಕಾರಿಗಳು ಎಲ್ಲ ಗ್ರಾಮಗಳಲ್ಲಿ ವಿದ್ಯುನ್ಮಾನ ಮತಯಂತ್ರದೊಂದಿಗೆ ವಿವಿ ಪ್ಯಾಟ್‌ ಯಂತ್ರದ ತರಬೇತಿ ಮತ್ತು ಮಾಹಿತಿ ನೀಡುವರು ಎಂದರು.

2019ರ ಜ. 1ಕ್ಕೆ ಹದಿನೆಂಟು ವರ್ಷ ಪೂರ್ಣವಾಗಿರುವ ಯುವ ಮತದಾರರು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಸರು ನೋಂದಣಿಗಾಗಿ ಪಾಲಕರ ಅಥವಾ ಸಂಬಂಧಿಕರ ಮತದಾರರ ಚೀಟಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

ಎಲ್ಲ ಶಾಲೆ-ಕಾಲೇಜುಗಳಲ್ಲಿ ಯುವ ಮತದಾರರನ್ನು ನೊಂದಾಯಿಸಿಕೊಳ್ಳಲು ಅರ್ಜಿಗಳನ್ನು ವಿತರಿಸಲಾಗಿದೆ. ಆಯಾ ಕಾಲೇಜುಗಳ ಪ್ರಾಂಶುಪಾಲರು ಮುತುವರ್ಜಿವಹಿಸಿ ಯುವ ಮತದಾರರನ್ನು ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು. 

Advertisement

ಸರ್ಕಾರಿ ಪಪೂ ಕಾಲೇಜಿನ ದ್ವಿತೀಯ ಪಿಯುಸಿ ಕಲಾವಿಭಾಗದ ವಿದ್ಯಾರ್ಥಿ ಪ್ರಕಾಶ ದತ್ತು ಗೌಳಿ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್‌ ವೀಕ್ಷಿಸಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ರಾಜ್ಯಶಾಸ್ತ್ರ ವಿಷಯದಲ್ಲಿ ಚುನಾವಣಾ ವ್ಯವಸ್ಥೆಯ ಸುಧಾರಣೆಗಳು ಪಠ್ಯವಿದ್ದು, ಅದರಲ್ಲಿ ಮತಯಂತ್ರಗಳ ಮಾಹಿತಿ ನೀಡಲಾಗಿದೆ. ಇಂದು ಪ್ರತ್ಯಕ್ಷವಾಗಿ ನಕಲು ಮತದಾನ ಮಾಡುವ ಮೂಲಕ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್‌ ವೀಕ್ಷಿಸಿರುವುದು ಉಪಯುಕ್ತವಾಗಿದೆ ಎಂದರು.

ಮತದಾರರ ಯಾದಿಯಲ್ಲಿ ನನ್ನ ಹೆಸರು ಸೇರಿಸಲು ಅರ್ಜಿ ಸಲ್ಲಿಸಿದ್ದು, ಲೋಕಸಭೆ ಚುನಾವಣೆಯಲ್ಲಿ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡಲು ಅನುಕೂಲವಾಗಿದೆ ಎಂದು ಸರ್ಕಾರಿ ಮಹಿಳಾ ಕಾಲೇಜು ವಿದ್ಯಾರ್ಥಿನಿ ಅಮ್ರಿನ್‌ ಶೇಖ್‌ ಅಭಿಪ್ರಾಯಪಟ್ಟರು. 

Advertisement

Udayavani is now on Telegram. Click here to join our channel and stay updated with the latest news.

Next