ಮೂಡಿಗೆರೆ : ಕಾಡಾನೆಯೊಂದು ಗ್ರಾಮಕ್ಕೆ ನುಗ್ಗಿದ ಪರಿಣಾಮ ಗ್ರಾಮದ ಜನ ಭಯಭೀತರಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹೊಸಳ್ಳಿಯಲ್ಲಿ ನಡೆದಿದೆ.
ಕಳೆದ ಕೆಲವು ದಿನಗಳಿಂದ ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ಜಾಸ್ತಿಯಾಗಿದ್ದು ಅಡಿಕೆ, ಬಾಳೆ, ಸೇರಿ ರೈತರು ಬೆಳೆದ ಬೆಳೆಗಳಿಗೆ ಹಾನಿಯಾಗಿವೆ.
ಕಾಡಾನೆಗಳ ನಿರಂತರ ದಾಳಿಯಿಂದ ರೈತರು ಕಂಗೆಟ್ಟಿದ್ದು, ಗ್ರಾಮಕ್ಕೆ ನುಗ್ಗಿದ ಆನೆಯನ್ನು ಓಡಿಸಲು ಅರಣ್ಯ ಇಲಾಖೆಯ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.
ಇದನ್ನೂ ಓದಿ :ಆನಂದ್ ಸಿಂಗ್ ಅವರ ಅಸಮಾಧಾನ ಎರಡು ದಿನಗಳಲ್ಲಿ ಸುಖಾಂತ್ಯವಾಗಲಿದೆ : ಸೋಮಣ್ಣ
ಕಾಡಾನೆಗಳ ನಿರಂತರ ದಾಳಿಯಿಂದ ರೈತರು ಬೆಳೆದ ಲಕ್ಷಾಂತರ ಮೌಲ್ಯದ ಕಾಫಿ, ಮೆಣಸು ಬೆಳೆಗಳು ಹಾನಿಯಾಗಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.