Advertisement

ಸುಬ್ರಹ್ಮಣ್ಯ: ಕಾಡಾನೆ ಶೋಧ ಮುಂದುವರಿಕೆ

12:22 AM Feb 25, 2023 | Team Udayavani |

ಸುಬ್ರಹ್ಮಣ್ಯ: ಕಡಬ ತಾಲೂಕಿನಲ್ಲಿ ಕಾಡಾನೆ ಪತ್ತೆ ಕಾರ್ಯ ಶುಕ್ರವಾರವೂ ಮುಂದುವರಿದಿದೆ. ಆದರೆ ಸಾಕಾನೆಗಳಿಗೆ ವಿರಾಮ ನೀಡಲಾಗಿತ್ತು

Advertisement

ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಇಬ್ಬರನ್ನು ಕೊಂದ ಬಳಿಕ ಕಾಡಾನೆ ಸೆರೆಗೆ ಕಾರ್ಯಾಚರಣೆ ಆರಂಭಿಸಲಾಗಿತ್ತು, ಮಂಗಳವಾರ ಕಾರ್ಯಾಚರಣೆ ಆರಂಭಗೊಂಡಿದ್ದು, ಮೂರನೇ ದಿನ ಕೊಂಬಾರು ಬಳಿಯ ಮಂಡೆಕರದಲ್ಲಿ ಕೃತ್ಯ ಎಸಗಿದ ಕಾಡಾನೆಯನ್ನು ಸೆರೆ ಹಿಡಿದು ನಾಗರಹೊಳೆ ಮತ್ತಿಗೋಡು ಸಾಕಾನೆ ಶಿಬಿರಕ್ಕೆ ಕೊಂಡೊಯ್ಯಲಾಯಿತು. ಇದರ ಜತೆ ಮುಂಜಾಗ್ರತ ಹಿನ್ನೆಲೆಯಲ್ಲಿ ಅಭಿಮನ್ಯು ಹಾಗೂ ಇನ್ನೊಂದು ಆನೆಯನ್ನೂ ಕರೆದೊಯ್ಯಲಾಗಿದೆ.

ಶುಕ್ರವಾರ ಶಿಬಿರದಲ್ಲಿದ್ದ ಕಾರ್ಯಾಚರಣೆಯ ಮೂರು ಆನೆಗಳಿಗೆ ವಿರಾಮ ನೀಡಲಾಗಿತ್ತು. ಬೆಳಗ್ಗೆ ಮೂರು ಸಾಕಾನೆಗಳನ್ನು ಪೇರಡ್ಕ ಬಳಿಯ ಶಿಬಿರದಿಂದ ನೆಟ್ಟಣದ ಕೇಂದ್ರೀಯ ಮರ ಸಂಗ್ರಹಣ ಘಟಕಕ್ಕೆ ಕರೆದೊಯ್ದು ವಿಶ್ರಾಂತಿಗೆ ವ್ಯವಸ್ಥೆ ಮಾಡಲಾಗಿತ್ತು. ಆದರೆ ಸಿಬಂದಿ ಕಾಡಾನೆ ಪತ್ತೆ ಕಾರ್ಯ ಮುಂದುವರಿಸಿದ್ದರು.

ನರ್ಸರಿಗೆ ದಾಳಿ
ಗುರುವಾರ ರಾತ್ರಿ ಕಾಡಾನೆ ಲಗ್ಗೆ ಇಟ್ಟ ಪ್ರದೇಶದ ಮಾಹಿತಿ ಪಡೆದ ಆ ಭಾಗದಲ್ಲಿ ಪತ್ತೆ ಕಾರ್ಯಾಚರಣೆ ತಂಡ ತನ್ನ ಕೆಲಸ ಮುಂದುವರಿಸಿ ಕಾಡಾನೆಯ ಇರುವಿಕೆ ಕಂಡುಕೊಳ್ಳುವತ್ತ ಕಾರ್ಯ ಮಾಡಿದೆ ಎಂದು ತಿಳಿದುಬಂದಿದೆ.

ಗುರುವಾರ ರಾತ್ರಿ ಗುಂಡ್ಯದ ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳು ಲಗ್ಗೆ ಇಟ್ಟಿವೆ ಎಂದು ತಿಳಿದುಬಂದಿದ್ದು, ಅಲ್ಲೂ ಪತ್ತೆ ಕಾರ್ಯ ನಡೆಸಲಾಗಿದೆ. ಆದರೆ ಆನೆ ಅಲ್ಲಿಂದ ತೆರಳಿದೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next