ಮಡಿಕೇರಿ: ಮದವೇರಿದ ಕಾಡಾನೆ ದಾಳಿ ಮಾಡಿದ ಪರಿಣಾಮ ಸಾಕಾನೆ ತೀವ್ರ ಗಾಯಗೊಂಡ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ.
ಸಾಕಾನೆ ಗೋಪಿ ಗಾಯ ಗೊಂಡಿದ್ದು, ವನ್ಯಜೀವಿ ತಜ್ಞರು ಚಿಕಿತ್ಸೆ ನೀಡುತ್ತಿದ್ದಾರೆ. ಕಾಡಾನೆ ಶಿಬಿರದ ಬಳಿಯೇ ಇರುವುದಾಗಿ ಅರಣ್ಯ ಅಧಿಕಾರಿಗಳು ತಿಳಿಸಿದ್ದು, ಸುರಕ್ಷೆಯ ದೃಷ್ಟಿಯಿಂದ ಸಾಕಾನೆ ಶಿಬಿರಕ್ಕೆ ಎರಡು ದಿನ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.
ಮಡಿಕೇರಿ ವಿಭಾಗದ ಅರಣ್ಯ ಉಪ ಸಂರಕ್ಷಣಾಧಿಕಾರಿ ಎ.ಟಿ. ಪೂವಯ್ಯ, ಸೋಮವಾರಪೇಟೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್, ಕುಶಾಲನಗರ ವಲಯ ಅರಣ್ಯ ಅಧಿಕಾರಿ ಕೆ.ವಿ. ಶಿವರಾಮ್ ಸ್ಥಳದಲ್ಲಿ ವಾಸ್ತವ್ಯ ಹೂಡಿದ್ದು, ಕಾಡಾನೆಯನ್ನು ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.