ರಾಮನಗರ: ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮತ್ತೆ ಮುಂದುವರಿದಿದ್ದು, ಕಾಡಾನೆ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾನೆ. ಮಾವಿನತೋಟ ಕಾಯುತ್ತಿದ್ದ ರೈತನ ಮೇಲೆ ಒಂಟಿಸಲಗ ದಾಳಿ ನಡೆಸಿದ್ದು, ರೈತ ಸಾವನ್ನಪ್ಪಿದ್ದಾನೆ.
ಚನ್ನಪಟ್ಟಣ ತಾಲೂಕಿನ ವಿರುಪಸಂದ್ರ ಗ್ರಾಮದಲ್ಲಿ ಶನಿವಾರ ಬೆಳಗ್ಗಿನ ಜಾವ ಘಟನೆ ನಡೆದಿದ್ದು, ಕನಕಪುರ ಮೂಲದ ವೀರಭದ್ರಯ್ಯ (52) ಅಸುನೀಗಿದ್ದಾರೆ.
ವೀರಭದ್ರಯ್ಯ ಅವರು ಕಳೆದ ಮೂರ್ನಾಲ್ಕು ತಿಂಗಳಿಂದ ಲೋಕೆಶ್ ಎಂಬುವವರ ಮಾವಿನ ತೋಟ ಕಾಯುತ್ತಿದ್ದರು. ಈ ತೋಟಕ್ಕೆ ಮುಂಜಾನೆ ಅನೆ ದಾಳಿಯಾಗಿದೆ.
ರಾಮನಗದ ರೈತರು ಕಾಡಾನೆ ಹಾವಳಿಯಿಂದ ಕಂಗೆಟ್ಟಿದ್ದು, ಇತ್ತೀಚೆಗಷ್ಟೇ ಕಬ್ಬಾಳು ಗ್ರಾಮ ಬಳಿಯೂ ಕಾಡಾನೆ ದಾಳಿಗೆ ರೈತರೊಬ್ಬರು ಬಲಿಯಾಗಿದ್ದರು.
Related Articles
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಲಾಗಿದೆ. ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.