Advertisement

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

01:45 AM Nov 29, 2024 | Team Udayavani |

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಾಚಹಳ್ಳಿಯಲ್ಲಿ 30 ವರ್ಷದ ಹೆಣ್ಣಾನೆಯ ಮೃತದೇಹ ಗುರುವಾರ ಪತ್ತೆಯಾಗಿದ್ದು, ಆಂಥ್ರಾಕ್ಸ್ (Anthrax) ಸೋಂಕಿನಿಂದ ಮೃತಪಟ್ಟಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕಿಸಿದ್ದಾರೆ.

Advertisement

ಇಲಾಖೆ ಸಿಬಂದಿ ಗಸ್ತು ತಿರುಗುತ್ತಿದ್ದಾಗ ಬೆಳಕಿಗೆ ಬಂದಿದೆ. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್‌ ಹಾಗೂ ವಲಯ ಅರಣ್ಯಾಧಿಕಾರಿ ಮಲ್ಲೇಶ್‌ ಪರಿಶೀಲನೆ ನಡೆಸಿದರು.

ಇಲಾಖಾ ಪಶು ವೈದ್ಯಾಧಿಕಾರಿ ಡಾ| ಮಿರ್ಜಾ ವಾಸೀಂ ಮರಣೋತ್ತರ ಪರೀಕ್ಷೆ ನಡೆಸಿದರು.ಆನೆಯ ಅಂಗಾಂಗ ಮಾದರಿಗಳನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next