Advertisement

ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯದ ಯಲಚೆಟ್ಟಿ ಶಾಖೆಯ ಲೊಕ್ಕರೆ ಬಳಿ ಹೆಣ್ಣಾನೆಯೊಂದು ಸ್ವಾಭಾವಿಕವಾಗಿ ಮೃತಪಟ್ಟಿದೆ.

Advertisement

ಮೃತ ಆನೆಗೆ 50ರಿಂದ 60 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದ್ದು, ಸ್ವಾಭಾವಿಕವಾಗಿ ವಯೋ ಸಹಜವಾಗಿ ಸಾವನ್ನಪ್ಪಿದೆ ಎಂದು ಅರಣ್ಯ ಇಲಾಖೆ ಮೂಲಗಳು ಮಾಹಿತಿ ನೀಡಿವೆ.

ಸ್ಥಳಕ್ಕೆ ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಎಸ್.ಆರ್. ನಟೇಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಪರಮೇಶ್, ಕುಂದಕೆರೆ ವಲಯ ಅರಣ್ಯಾಧಿಕಾರಿ ಡಿ. ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಇಲಾಖಾ ಪಶು ವೈದ್ಯಾಧಿಕಾರಿ ಡಾ.ವಾಸೀಂ ಮಿರ್ಜಾ ಅವರಿಂದ ಮೃತ ಹೆಣ್ಣಾನೆಯ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

 

Advertisement

Udayavani is now on Telegram. Click here to join our channel and stay updated with the latest news.

Next