ರಾಮನಗರ: ಮಾಜಿ ಸಚಿವ, ಹಾಲಿ ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಹೊಸ ಹುರುಪು ಮೂಡಿದೆ. ಅವರ ನಾಯಕತ್ವದಿಂದ ಪಕ್ಷ ಮತ್ತಷ್ಟು ಬಲಿಷ್ಠವಾಗಿದೆ. ಭವಿಷ್ಯದಲ್ಲಿ ಜಿಲ್ಲೆಯ ಎಲ್ಲ ವಿಧಾನಸಭೆ ಕ್ಷೇತ್ರಗಳಿಂದ ಕಾಂಗ್ರೆಸ್ ಶಾಸಕರು ಆಯ್ಕೆಯಾಗಲಿ ದ್ದಾರೆ. ತಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಗಂಗಾಧರ್ ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಏರ್ಪಡಿಸಿದ್ದ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಅಧಿಕಾರ ಸ್ವೀಕಾರ ಸಮಾರಂಭದ ಡಿಜಿಟಲ್ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿರುವುದು ತಮ್ಮ ಪಕ್ಷಕ್ಕೆ ಮತ್ತಷ್ಟು ಬಲ ತುಂಬಿದೆ ಎಂದರು. ಪ್ರತಿಜ್ಞಾ ಸ್ವೀಕಾರ ಸಭೆ ನೇರಪ್ರಸಾರವನ್ನು ಜಿಲ್ಲೆಯ 130 ಸ್ಥಳಗಳಲ್ಲಿ ಆಯೋಜಿಸಲಾಗಿತ್ತು.
ತಮ್ಮ ನಿರೀಕ್ಷೆಗೂ ಮೀರಿದ ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ಕಾರ್ಯಕರ್ತರು ನೇರಪ್ರಸಾರ ವೀಕ್ಷಿಸಿದ್ದಾರೆ. ಸಾಮಾಜಿಕ ಜಾಲತಾಣಗಳು, ನ್ಯೂಸ್ ಚಾನಲ್‌ಗಳಲ್ಲಿ ಕೂಡ ಸಾರ್ವಜನಿಕರು ವೀಕ್ಷಿಸಿ ದ್ದಾರೆ. ರಾಜ್ಯದಲ್ಲಿ ಕನಿಷ್ಠ 19ರಿಂದ 20 ಲಕ್ಷ ಮಂದಿ ಅಧಿಕಾರ ಸ್ವೀಕಾರಕ್ಕೆ ಸಾಕ್ಷಿಯಾಗಿದ್ದಾರೆ ಎಂದರು.
ಅಭಿವೃದ್ಧಿ ಕಾಣದ ಕ್ಷೇತ್ರ: ಜಿಪಂ ಮಾಜಿ ಅಧ್ಯಕ್ಷ ಇಕ್ಬಾಲ್ ಹುಸೇನ್ ಮಾತನಾಡಿ, ಡಿ.ಕೆ.ಶಿವಕುಮಾರ್, ಜ್ಯದಲ್ಲಿ ಪಕ್ಷದ ಚುಕ್ಕಾಣಿ ಹಿಡಿದಿದ್ದು, ಪಕ್ಷ ಬಲಿಷ್ಠ ವಾಗಿದೆ. ಜನರಲ್ಲಿ ಆಶಾಭಾವನೆ ಚಿಗುರೊಡೆದಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿ ಕ್ಷೇತ್ರ ಅಭಿವೃದ್ಧಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷ ತೊರೆದವರನ್ನು ಕರೆ ತರಲು ಆದ್ಯತೆ: ರಾಮನಗರ ಜಿಲ್ಲೆಯಲ್ಲಿ ಪಕ್ಷವನ್ನು ಬೂತ್‌ಮಟ್ಟದಲ್ಲಿ ಸಂಘಟನೆ ಆರಂಭವಾಗಿದೆ. ಪಕ್ಷ ತೊರೆದವರನ್ನು ವಾಪಸು ಕರೆತರಲು ಆದ್ಯತೆ ನೀಡಲಾಗುವುದು. ಪಕ್ಷ ತೊರೆದವರ ಪಟ್ಟಿ ಸಿದಟಛಿವಾ ಗಿದೆ. ಮೇಲಾಗಿ ಡಿ.ಕೆ.ಶಿವಕುಮಾರ್, ಅಧ್ಯಕ್ಷರಾಗಿರುವುದರಿಂ ದ ಅನ್ಯ ಪಕ್ಷಗಳ ಅನೇಕ ಕಾರ್ಯಕರ್ತರು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ ಎಂದರು.
ಜಿಲ್ಲಾ ಉಸ್ತುವಾರಿ ಅನಿಲ ಕುಮಾರ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ನರಸಿಂಹಮೂರ್ತಿ, ಗ್ರಾಮಾಂ ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಚ್.ರಾಜು, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಬಿ.ಸಿ. ಪಾರ್ವತಮ್ಮ, ಪ್ರಮುಖಜ ಯಮ್ಮ, ಕೆ.ಟಿ.ಲಕ್ಷ್ಮಮ್ಮ ಇದ್ದರು.