Advertisement
ಮುಂಜಾನೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು, ಇದನ್ನು ಗಮನಿಸಿದ ಗ್ರಾಮಸ್ಥರು ತತ್‌ಕ್ಷಣವೇ ಅರಣ್ಯ ಇಲಾಖೆಯ ಗಮನಕ್ಕೆ ತಂದರು. ಸ್ಥಳಕ್ಕೆ ಆಗಮಿಸಿದ ಕುಶಾಲನಗರ ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಅತ್ತೂರು ಉಪವಲಯ ಅರಣ್ಯಾಧಿಕಾರಿ ಉಮೇಶ್ ನೇತೃತ್ವದ ಸಿಬಂದಿ ಆನೆಯನ್ನು ಅರಣ್ಯಕ್ಕೆ ಅಟ್ಟಲು ಕ್ರಮ ಕೈಗೊಂಡರು.
ಸುಳ್ಯ: ಸುಳ್ಯ ಸಮೀಪದ ಕಾಯರ್ತೋಡಿ ಪರಿಸರದ ಕೃಷಿ ತೋಟಕ್ಕೆ ಕಳೆದ ರಾತ್ರಿ ಕಾಡಾನೆ ಲಗ್ಗೆ ಇಟ್ಟು ಕೃಷಿ ಹಾನಿ ಮಾಡಿದೆ. ವಿಜಯ ಪಡ್ಪು ಅವರ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆ ತೆಂಗಿನ ಗಿಡ ಮತ್ತು ಬಾಳೆ ಕೃಷಿ ನಾಶಪಡಿಸಿದೆ. ಈ ಭಾಗದಲ್ಲಿ ಕೆಲವು ದಿನಗಳಿಂದ ನಿರಂತರವಾಗಿ ಕೃಷಿ ತೋಟಕ್ಕೆ ಕಾಡಾನೆ ಲಗ್ಗೆ ಇಡುತ್ತಿದ್ದು ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದರು.