Advertisement

ಎತ್ತಿನಹೊಳೆ ಯೋಜನೆ ಪೈಪ್‌ ಲಾಬಿಗೆ ಸೀಮಿತ: ಬಿಎಸ್‌ವೈ

03:45 AM Jun 11, 2017 | Team Udayavani |

ಚಿಕ್ಕಬಳ್ಳಾಪುರ: ಎತ್ತಿನಹೊಳೆ ಯೋಜನೆಯನ್ನು ಕಾಂಗ್ರೆಸ್‌ ಸರ್ಕಾರ ಕೇವಲ ಪೈಪ್‌ ಲಾಬಿಗೆ ಮಾತ್ರ ಅನುಷ್ಠಾನಗೊಳಿಸುತ್ತಿದೆ. ಕಾಲಮಿತಿಯೊಳಗೆ ಯೋಜನೆ ಜಾರಿಗೊಳಿಸುವಲ್ಲಿ ಸರ್ಕಾರ ಸಂಪೂರ್ಣ ವಿಫ‌ಲವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದರು.

Advertisement

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎತ್ತಿನಹೊಳೆ ಅನುಷಾzನದ ಪ್ರಗತಿ ನೋಡಿದರೆ ನಾಲ್ಕೈದು ವರ್ಷ ವಿಳಂಬವಾಗಬಹುದೆಂಬ ಅನುಮಾನವಿದೆ. ಎತ್ತಿನಹೊಳೆ ಸೇರಿದಂತೆ ಜಿಲ್ಲೆಗೆ ಶಾಶ್ವತ ನೀರಾವರಿ ಕಲ್ಪಿಸುವಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಶಾಶ್ವತ ನೀರಾವರಿ ಯೋಜನೆ ಜಾರಿಗೊಳಿಸಲು ಬದ್ಧವಾಗಿರುವುದಾಗಿ ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆ ಬೆಂಗಳೂರಿಗೆ ಹತ್ತಿರ ಇದ್ದರೂ ಕಳೆದ ನಾಲ್ಕು ವರ್ಷಗಳಲ್ಲಿ ಒಂದು ಕೈಗಾರಿಕೆ ಬರಲು ಸಾಧ್ಯವಾಗಿಲ್ಲ. ಇಲ್ಲಿನ ಕಾಂಗ್ರೆಸ್‌ ನಾಯಕರು ಜಿಲ್ಲೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಹಾಗೂ ಮರಳು ದಂಧೆಗೆ ಕುಮ್ಮಕ್ಕು ನೀಡುತ್ತಿದ್ದಾರೆಂದು. ಜಿಲ್ಲೆಯ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ಶಿಡ್ಲಘಟ್ಟದಲ್ಲಿ ಇನ್ನೂ ಎಪಿಎಂಸಿ ಸ್ಥಾಪಿಸಿಲ್ಲ. ನಾನು ಸಿಎಂ ಆಗಿದ್ದಾಗ ಜಿಲ್ಲಾ ಕೇಂದ್ರದಲ್ಲಿ ಉಪ ವಿಭಾಗ ಕಟ್ಟಡ, ಕೆಎಸ್‌ಆರ್‌ಟಿ ಬಸ್‌ ನಿಲ್ದಾಣಕ್ಕೆ ಭೂಮಿ ಮಂಜೂರು, ಜಿಲ್ಲಾಸ್ಪತ್ರೆಗೆ 3 ಕೋಟಿ ರೂ. ಅನುದಾನ ನೀಡಿದ್ದೆ. ಕಾಂಗ್ರೆಸ್‌ ಸರ್ಕಾರ ಪರಿಶಿಷ್ಟ ಜಾತಿ, ಪಂಗಡದವರಿಗೆ ಯಾವುದೇ ಮೂಲ ಸೌಕರ್ಯ ಕಲ್ಪಿಸುತ್ತಿಲ್ಲ ಎಂದರು.

ಜು.10ಕ್ಕೆ ವಿಧಾನಸೌಧ ಮುತ್ತಿಗೆ: ರಾಜ್ಯದಲ್ಲಿ ಭೀಕರ ಬರಗಾಲ ಇದ್ದು, ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಬರದಿಂದ ತತ್ತರಿಸಿದ ರೈತರ ಸಾಲ ಮನ್ನಾ ಮಾಡುವಲ್ಲಿ ಕಾಂಗ್ರೆಸ್‌ ಸರ್ಕಾರ ಮೀನಮೇಷ ಎಣಿಸುತ್ತಿದೆ. ರಾಜ್ಯದಲ್ಲಿ ವಿರೋಧ ಪಕ್ಷಗಳಿವೆ ಎಂಬುದನ್ನು ಕಾಂಗ್ರೆಸ್‌ ಸರ್ಕಾರ ಮರೆತಿದೆ. ರೈತರ ಸಾಲ ಮನ್ನಾ ಮಾಡದಿದ್ದರೆ ಜುಲೈ 10 ರಂದು ಲಕ್ಷಾಂತರ ರೈತರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದೆಂದು ಸ್ಪಷ್ಟಪಡಿಸಿದರು.
 

Advertisement

Udayavani is now on Telegram. Click here to join our channel and stay updated with the latest news.

Next