Advertisement

ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ

08:02 PM Apr 19, 2021 | Team Udayavani |

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಆವರಣ ದಲ್ಲಿಯೇ ಕಾಡಾನೆಯೊಂದು ರವಿವಾರ ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

Advertisement

ಕವಿವಿ ಭದ್ರತಾ ಸಿಬ್ಬಂದಿ ಶನಿವಾರ ರಾತ್ರಿ ಗಸ್ತು ಸುತ್ತುವಾಗ ಹೊಸ ವಸತಿ ಗೃಹದ ಬಳಿ ಆನೆ ಕಂಡಿದೆ. ಕೂಡಲೇ ಅರಣ್ಯ ಇಲಾಖೆ ಅ ಧಿಕಾರಿಗಳಿಗೆ ಮಾಹಿತಿ ನೀಡಿ, ಕವಿವಿ ಅಧಿಕಾರಿಗಳು, ನಿವಾಸಿಗಳಿಗೆ ಹಾಗೂ ವಿದ್ಯಾರ್ಥಿಗಳು ಹೊರ ಬರದಂತೆ ಸೂಚನೆ ನೀಡಲಾಗಿದೆ. ಆ

ನೆಯು ಉತ್ತರ ಕನ್ನಡ ಜಿಲ್ಲೆಯ ಕಾಡು ಪ್ರದೇಶದಿಂದ ಆಹಾರ ಅರಸುತ್ತ ಹಾದಿ ತಪ್ಪಿ ಬಂದಿರುವ ಸಾಧ್ಯತೆಯಿದೆ. ಈಗಾಗಲೇ ಉಪ ಅರಣ್ಯ ಸಂರಕ್ಷ‌ಣಾಧಿಕಾರಿ ಯಶಪಾಲ್‌ ಕ್ಷೀರಸಾಗರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಪರಿಶೀಲನೆ ಬಳಿಕ ಆನೆ ಇರುವ ಸ್ಥಳ ಪತ್ತೆ ಮಾಡಿದ್ದು, ರವಿವಾರ ಇಡೀ ರಾತ್ರಿ ಕಾರ್ಯಾಚರಣೆ ಕೈಗೊಂಡು ಸೋಮವಾರ ಬೆಳಗ್ಗೆಯೊಳಗೆ ಆನೆಯನ್ನು ಮರಳಿ ಕಾಡಿಗೆ ಕಳುಹಿಸುವತ್ತ ಅರಣ್ಯ ಇಲಾಖೆ ಸಿಬ್ಬಂದಿ ಕಾಯೋನ್ಮುಖರಾಗಿದ್ದಾರೆ.

ಕವಿವಿ, ಪಾವಟೆನಗರ, ಗಣೇಶನಗರ, ಹನುಮಂತನಗರ, ಹೊಯ್ಸಳ ನಗರ, ಶಾಂಭವಿ ನಗರ, ನವೋದಯನಗರ, ಕಲ್ಯಾಣನಗರ ನಿವಾಸಿಗಳು, ವಸತಿ ನಿಲಯಗಳ ವಿದ್ಯಾರ್ಥಿಗಳು ಅನಗತ್ಯವಾಗಿ ಹೊರಗೆ ಸಂಚರಿಸಬಾರದು. ಗುಂಪು ಸೇರಿ ಗೊಂದಲದ ವಾತಾವರಣ ಸೃಷ್ಟಿಸಬಾರದು. ಜನರಿಗೆ ತೊಂದರೆಯಾಗದಂತೆ ಕಾರ್ಯಾಚರಣೆ ನಡೆಸಿ ಪರಿಸ್ಥಿತಿ ಸಹಜತೆಗೆ ತರಲಾಗುವುದು. ಜನರು ಯಾವುದೇ ಕಾರಣಕ್ಕೂ ಭಯಪಡಬೇಕಿಲ್ಲ ಎಂದು ಉಪ ಅರಣ್ಯ ಸಂರಕÒ‌ಣಾ ಧಿಕಾರಿ ಯಶಪಾಲ್‌ ಕ್ಷೀರಸಾಗರ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next