Advertisement
ದೆಹಲಿಯಲ್ಲಿ ಬುಧವಾರ ಭೇಟಿ ಮಾಡಿದ್ದ ವೇಳೆ, ಅವಳಿ ನಗರಗಳ ನಡುವೆ ಎಲಿವೇಟೆಡ್ ರಸ್ತೆ ನಿರ್ಮಾಣದ ಅಗತ್ಯತೆ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವರಿಕೆ ಮಾಡಿ ಕೊಟ್ಟರು. ಯೋಜನೆಗೆ ಒಪ್ಪಿಗೆಯೂ ದೊರೆತಿದೆ. ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಸಿಎಂ, ಅವಳಿ ನಗರಗಳ ನಡುವಿನ ಎಲಿವೇಟೆಡ್ ರಸ್ತೆ ನಿರ್ಮಾಣ ಕಾಮಗಾರಿ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣ ಗೊಳಿಸಿದ ಕೂಡಲೇ ಕೈಗೆತ್ತಿ ಕೊಳ್ಳಲಾಗುವುದು ಎಂದರು. ಕರ್ನಾಟಕ- ಗೋವಾ ರಾಜ್ಯ ಸಂಪರ್ಕಿಸುವ ರಾಷ್ಟ್ರೀಯಹೆದ್ದಾರಿ ಎರಡು ಪಥಗಳಾಗಿದ್ದು ಇದರ ಅಗಲೀಕರಣಕ್ಕಾಗಿ ಮುಂದಿನ 18 ತಿಂಗಳ ಕಾಲ ರಸ್ತೆ ಬಂದ್ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಳಸಬಹುದಾದ ಪರ್ಯಾಯ ಸಂಪರ್ಕ ಮಾರ್ಗಗಳ ಅಭಿವೃದ್ಧಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದಲೇ ಕೈಗೆತ್ತಿಕೊಳ್ಳಲು ಮನವಿ ಮಾಡಲಾಗಿದೆ ಎಂದರು.
ರಾಯಪಟ್ಟಣ-ಹೊಳೇನರಸೀಪುರ -ಅರಕಲಗ ೂಡು-ಕೊಡ್ಲಿಪೇಟೆ-ಮಡಿಕೇರಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ
ಮೇಲ್ದರ್ಜೆಗೆ ಸೇರಿಸುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಗಿದೆ. ಸಚಿವರು ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು. ಲೋಕೋ ಪಯೋಗಿ ಸಚಿವ ಎಚ್.ಡಿ .ರೇವಣ್ಣ, ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್, ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ ಉಪಸ್ಥಿತರಿದ್ದರು. ಇಂದು ಮೋದಿ ಭೇಟಿ: ಕುಮಾರ ಸ್ವಾಮಿಯವರು ಗುರುವಾರ ಪ್ರಧಾನಿ ನರೇಂದ್ರಮೋದಿ ಅವರನ್ನು ಭೇಟಿ ಮಾಡಲಿದ್ದು, ರಾಜ್ಯದ ಯೋಜನೆಗಳು ಹಾಗೂ ಮೇಕೆದಾಟು, ಮಹದಾಯಿ ಕುರಿತು ಚರ್ಚಿಸಲಿದ್ದಾರೆ. ಕೇಂದ್ರ ಸಚಿವರಾದ ಸುರೇಶ್‌ಪ್ರಭು, ಅರುಣ್ ಜೇಟ್ಲಿ,
ಪಿಯೂಶ್ ಗೋಯೆಲ್, ಸಿದ್ಧಾರ್ಥ್ ನಾಥ್ ಸಿಂಗ್ ಅವರನ್ನು ಭೇಟಿ ಮಾಡುವ ಕಾರ್ಯಕ್ರಮವಿದೆ.