Advertisement
ಗೌಳಿ ಮೇಲೆ ಕಿಟ್ಟಿ ಕಣ್ಣು
Related Articles
Advertisement
ಈಗಾಗಲೇ ಭರವಸೆ ಮೂಡಿಸಿರುವ ಸಿನಿಮಾ “ಜೂಲಿಯೆಟ್-2′ ಇಂದು ತೆರೆಕಾಣುತ್ತಿದೆ.ಇದು ಸಂಪೂರ್ಣ ಹೊಸಬರ ಚಿತ್ರ. ಕರಾವಳಿ ಮೂಲದ ವಿರಾಟ್ ಈ ಚಿತ್ರದ ನಿರ್ದೇಶಕರು. ಲಿಖೀತ್.ಆರ್. ಕೋಟ್ಯಾನ್ ನಿರ್ಮಾಣದ ಈ ಚಿತ್ರದಲ್ಲಿ “ಪ್ರೇಮಂ ಪೂಜ್ಯಂ’ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಬೃಂದಾ ಆಚಾರ್ಯ “ಜ್ಯೂಲಿಯೆಟ್-2′ ಚಿತ್ರದಲ್ಲಿ ಜೂಲಿಯೆಟ್ ಆಗಿ ಕಾಣಿಸಿಕೊಂಡಿದ್ದಾರೆ. “ಇದು ನಾಯಕಿ ಪ್ರಧಾನ ಚಿತ್ರ. ಚಿಕ್ಕ ವಯಸ್ಸಿನಲ್ಲಿ ತನಗಾದ ಅನ್ಯಾಯಕ್ಕೆ ದೊಡ್ಡವಳಾದ ನಂತರ ಆಕೆ ಹೇಗೆ ಸೇಡುತೀರಿಸಿಕೊಳ್ಳುತ್ತಾಳೆ ಎಂಬ ಅಂಶದೊಂದಿಗೆ ಚಿತ್ರ ಸಾಗುತ್ತದೆ. ಇಡೀ ಸಿನಿಮಾ ಕಾಡಿನ ನಡುವಿನ ಒಂಟಿ ಮನೆಯಲ್ಲಿ ಹಾಗೂ ರಾತ್ರಿ ಹೊತ್ತಲ್ಲೇ ನಡೆಯುತ್ತದೆ. ಬೆಳ್ತಂಗಡಿ ಬಳಿಯ ಕಾಜೂರು ಎಂಬ ಕಾಡಿನಲ್ಲಿ ಚಿತ್ರೀಕರಿಸಲಾಗಿದೆ. ಇಲ್ಲಿ ತಂದೆ-ಮಗಳ ಬಾಂಧವ್ಯ ಕೂಡಾ ಇದೆ’ ಎಂದು ಚಿತ್ರದ ಬಗ್ಗೆ ಹೇಳುತ್ತಾರೆ. ಅಂದಹಾಗೆ, ಇದು ಕ್ರೈಮ್ ಥ್ರಿಲ್ಲರ್ ಜಾನರ್‌ನ ಚಿತ್ರ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ.
ತೆರೆಮೇಲೆ ಕಾಶ್ಮೀರ ಚಿತ್ರಣ ವಿಧಿ 370 ಬಿಡುಗಡೆ
“ವಿಧಿ 370′ ಸಿನಿಮಾ ಇಂದು ತೆರೆಕಾಣುತ್ತಿದೆ. ಚಿತ್ರದ ಬಗ್ಗೆ ಮಾತನಾಡುವ ಚಿತ್ರತಂಡ, “ಜಮ್ಮು ಮತ್ತು ಕಾಶ್ಮೀರದ ರಾಜಕೀಯ, ಸಾಮಾಜಿಕ ಸ್ಥಿತಿಗತಿಗಳ ಬಗ್ಗೆ ಸಾಕಷ್ಟು ಅಧ್ಯಯನ ಮಾಡಿ ಈ ಸಿನಿಮಾವನ್ನು ಮಾಡಿದ್ದೇವೆ. “ಆರ್ಟಿಕಲ್ 370′ ರದ್ದಾದ ಬಳಿಕ ಈಗ ಜಮ್ಮು ಮತ್ತು ಕಾಶ್ಮೀರ ಹೇಗಿದೆ ಎಂಬುದನ್ನು ಈ ಸಿನಿಮಾದಲ್ಲಿ ತೋರಿಸಿದ್ದೇವೆ. ಇದರಲ್ಲೊಂದು ಸಂದೇಶವಿದೆ. ಬಹುತೇಕರ ಅರಿವಿಗೆ ಬಾರದಿರುವ ಹಲವು ವಿಷಯಗಳನ್ನು ಸಿನಿಮಾದಲ್ಲಿ ಚರ್ಚಿಸಿದ್ದೇವೆ. ಇದೊಂದು ನೈಜ ಘಟನೆಗಳನ್ನು ಕುರಿತಾಗಿ ಮಾಡಿದ ಸಿನಿಮಾ. ಈ ಸಿನಿಮಾವನ್ನು ಮುಖ್ಯವಾಗಿ ಭಾರತೀಯ ಸೈನಿಕರು ಮತ್ತು ಕಾಶ್ಮೀರಿ ಪಂಡಿತರಿಗೆ ಸಮರ್ಪಿಸುತ್ತಿದ್ದೇವೆ. ಸಿನಿಮಾದ ಬಹುತೇಕ ಚಿತ್ರೀಕರಣವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿಯೇ ಮಾಡಿದ್ದೇವೆ. ಕನ್ನಡದ ಮಟ್ಟಿಗೆ ಇದೊಂದು ಹೊಸರೀತಿಯ ಸಿನಿಮಾ’ ಎಂದು ವಿವರಣೆ ಕೊಡುತ್ತದೆ. “ಲೈರಾ ಎಂಟರ್‌ಟೈನರ್’ ಬ್ಯಾನರ್‌ನಲ್ಲಿ ಭರತ್ ಗೌಡ ಮತ್ತು ಸಿ. ರಮೇಶ್ ನಿರ್ಮಿಸಿರುವ “ವಿಧಿ 370′ ಚಿತ್ರಕ್ಕೆ ಕೆ. ಶಂಕರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಶಶಿಕುಮಾರ್, ಶೃತಿ, ಶಿವರಾಂ ಮೊದಲಾದ ಕಲಾವಿದರು “ವಿಧಿ 370′ ಸಿನಿಮಾದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ರವಿಪ್ರಕಾಶ್ ರೈ