ಮುಂಬೈ: ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದ ಆರೋಪಿ, ವಿದ್ವಾಂಸ- ಸಾಮಾಜಿಕ ಕಾರ್ಯಕರ್ತ ಆನಂದ್ ತೇಲ್ತುಂಬ್ಡೆ ಅವರು ನವಿ ಮುಂಬೈನ ತಲೋಜಾ ಕೇಂದ್ರ ಕಾರಾಗೃಹದಿಂದ ಶನಿವಾರ ಬಿಡುಗಡೆಯಾಗಿದ್ದಾರೆ. ಜಾಮೀನು ಪ್ರಶ್ನಿಸಿ ಎನ್‌ಐಎ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಒಂದು ದಿನದ ನಂತರ ಬಿಡುಗಡೆ ಮಾಡಲಾಗಿದೆ.
ಪ್ರಕರಣದಲ್ಲಿ ಎರಡೂವರೆ ವರ್ಷಗಳ ಕಾಲ ಜೈಲಿನಲ್ಲಿದ್ದ 73 ವರ್ಷದ ತೇಲ್ತುಂಬ್ಡೆ ಅವರು ಮಧ್ಯಾಹ್ನ 1.15 ರ ಸುಮಾರಿಗೆ ಜೈಲಿನಿಂದ ಹೊರಬಂದರು.
ಮಾಧ್ಯಮ ಪ್ರತಿನಿಧಿಗಳಿಗೆ ಸಂತಸ ವ್ಯಕ್ತಪಡಿಸಿ, “31 ತಿಂಗಳ ನಂತರ ಜೈಲಿನಿಂದ ಬಿಡುಗಡೆಯಾದ ನಂತರ ನಾನು ಸಂತೋಷವಾಗಿದ್ದೇನೆ. ಇದು ಸ್ಪಷ್ಟವಾಗಿದೆ, ಆದರೆ ದುಃಖದ ವಿಷಯವೆಂದರೆ ಇದು ನಕಲಿ ಪ್ರಕರಣವಾಗಿದೆ ಮತ್ತು ಇದು ನಮ್ಮನ್ನು ವರ್ಷಗಳ ಕಾಲ ಕಂಬಿಗಳ ಹಿಂದೆ ಇರಿಸಿದೆ ಎಂದರು.
ತೇಲ್ತುಂಬ್ಡೆಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಎನ್‌ಐಎ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಒಂದು ದಿನದ ನಂತರ ಜಾಮೀನು ವಿಧಿವಿಧಾನಗಳನ್ನು ಪೂರ್ಣಗೊಳಿಸಿದ ನಂತರ ಅವರನ್ನು ಬಿಡುಗಡೆ ಮಾಡಲಾಯಿತು.
Related Articles
ನವೆಂಬರ್ 18 ರಂದು, ಏಪ್ರಿಲ್ 14, 2020 ರಂದು ಕೇಂದ್ರ ಸಂಸ್ಥೆಯಿಂದ ಬಂಧಿಸಲ್ಪಟ್ಟ ತೇಲ್ತುಂಬ್ಡೆಗೆ ಹೈಕೋರ್ಟ್ ಜಾಮೀನು ನೀಡಿತ್ತು. ಅವರು ಯಾವುದೇ ಕೃತ್ಯಗಳಲ್ಲಿ ಭಾಗಿಯಾಗಿರುವ ಬಗ್ಗೆ ಪ್ರಾಥಮಿಕವಾಗಿ ಯಾವುದೇ ಪುರಾವೆಗಳಿಲ್ಲ ಎಂದು ಹೈಕೋರ್ಟ್ ಗಮನಿಸಿದೆ. ಜಾಮೀನಿನ ಮೇಲೆ ಬಿಡುಗಡೆಯಾಗಲಿರುವ ಪ್ರಕರಣದಲ್ಲಿ ಬಂಧಿತರಾದ 16 ಆರೋಪಿಗಳಲ್ಲಿ ತೇಲ್ತುಂಬ್ಡೆ ಮೂರನೇಯವರು.