ಕಲಬುರಗಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬರುವ ಜನವರಿ 13 ರಂದು ನಡೆಸಲಿರುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ( ಕೆಸೆಟ್-2023) ಪರೀಕ್ಷೆಗೆ ನಿಗದಿ ಮಾಡಲಾಗಿರುವ ಕಲಬುರಗಿಯಲ್ಲಿನ ಪರೀಕ್ಷಾ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಈ ಕುರಿತು ಕೆಇಎ ಅಧಿಕೃತ ಪ್ರಕಟಣೆ ಹೊರಡಿಸಿದೆ.
ಪಿಎಸ್ಐ ಹಾಗೂ ಈಚೆಗೆ ನಡೆದ ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಪರೀಕ್ಷೆ ನಡೆಸದಿರಲು ನಿರ್ಧಾರ. ಅದೇ ರೀತಿ ವಿಜಯಪುರದಲ್ಲಿನ ಕೇಂದ್ರವನ್ನು ತುಮಕೂರಿಗೆ ಸ್ಥಳಾಂತರಿಸಲಾಗಿದೆ.
ಪಿಎಸ್ಐ ಮರು ಪರೀಕ್ಷೆಯನ್ನು ಈಗಾಗಲೇ ಬೆಂಗಳೂರಿನಲ್ಲಿ ನಡೆಸಲು ತೆಗೆದುಕೊಂಡ ತೀರ್ಮಾನ ನಂತರ ಇದೀಗ ಸಹಾಯಕ ಪ್ರಾಧ್ಯಾಪಕರ ಅರ್ಹಾತಾ ಪರೀಕ್ಷೆಯನ್ನು ಬೆಂಗಳೂರಿನಲ್ಲಿ ನಡೆಸುವ ಮುಖಾಂತರ ಕಲಬುರಗಿಯಲ್ಲಿ ಪರೀಕ್ಷೆ ನಡೆದರೆ ಅಕ್ರಮ ನಡೆಯುವ ಸಾಧ್ಯತೆ ಎಂಬ ತೀರ್ಮಾನಕ್ಕೆ ಬಂದಂತಿದೆ.
ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಕಲ್ಯಾಣ ಕರ್ನಾಟಕದಿಂದ ಹೆಚ್ಚಿನ ಅಭ್ಯರ್ಥಿ ಗಳು ಅರ್ಜಿ ಸಲ್ಲಿಸಿದ್ದಾರೆ. ಒಟ್ಟಾರೆ ಕಲಬುರಗಿಯಲ್ಲಿನ ಪರೀಕ್ಷಾ ಕೇಂದ್ರ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ.
ಇದನ್ನೂ ಓದಿ: Bagalkote: ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಒಂದಾದ 9 ದಂಪತಿ